Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸ್ವಚ್ಛ ಕೊಡಗು – ಸುಂದರ ಕೊಡಗು ಅಭಿಯಾನದಲ್ಲಿ 200 ಟನ್ ತ್ಯಾಜ್ಯ ಸಂಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸ್ವಚ್ಛ ಕೊಡಗು – ಸುಂದರ ಕೊಡಗು ಅಭಿಯಾನದಲ್ಲಿ 200 ಟನ್ ತ್ಯಾಜ್ಯ ಸಂಗ್ರಹ*

ಅಕ್ಟೋಬರ್ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.17 NEWS DESK : ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ಕೈಗೊಳ್ಳಲಾದ ಸ್ವಚ್ಛ ಕೊಡಗು – ಸುಂದರ ಕೊಡಗು ಸ್ವಚ್ಛತಾ ಅಭಿಯಾನದ ಸಂದಭ೯ ಜಿಲ್ಲೆಯಾದ್ಯಂತ 200 ಟನ್ ತ್ಯಾಜ್ಯ ಸಂಗ್ರಹವಾಗಿದ್ದು, ಮೈಸೂರಿನ ತ್ಯಾಜ್ಯ ವಿಲೇವಾರಿ ಸಂಗ್ರಹಾಗಾರ ಸೇರಿದಂತೆ ಕೊಡಗು ಜಿಲ್ಲೆಯ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಇವುಗಳನ್ನು ರವಾನಿಸಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ ಮಾಹಿತಿ ನೀಡಿದ್ದಾರೆ. ಸ್ವಚ್ಛ ಕೊಡಗು – ಸುಂದರ ಕೊಡಗು ಅಭಿಯಾನದಲ್ಲಿ ಜಿಲ್ಲೆಯ 30 ಸಾವಿರದಷ್ಟು ಸ್ವಚ್ಛತಾ ಕಾಯ೯ಕತ೯ರಿಗೆ 33,800 ಕೈಕವಚ ಮತ್ತು 9,200 ತ್ಯಾಜ್ಯ ಸಂಗ್ರಹಣಾ ಬ್ಯಾಗ್ ಗಳನ್ನು ವಿತರಿಸಲಾಗಿದೆ. ಜಿಲ್ಲೆಯ 178 ಸ್ಥಳಗಳಲ್ಲಿ 330 ಕ್ಕೂ ಅಧಿಕ ಸಂಘಸಂಸ್ಥಗಳಿಗೆ ಸೇರಿದ ಅಂದಾಜು 30 ಸಾವಿರದಷ್ಟು ಜನರು ಸ್ವಯಂ ಪ್ರೇರಣೆಯಿಂದ ಸ್ವಚ್ಛತಾ ರಾಯಬಾರಿಗಳಾಗಿ ಜಿಲ್ಲೆಯಾದ್ಯಂತ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು ಎಂದು ದಿನೇಶ್ ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಪ್ರಯತ್ನದಿಂದ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಸಹಕಾರ ಪಡೆದು 17 ಸಂಗ್ರಹ ಸಂಗ್ರಹಣ ಕೇಂದ್ರಗಳಿಂದ ಪಡೆದುಕೊಂಡ ತ್ಯಾಜ್ಯವನ್ನು ಜಿಲ್ಲೆಯ 145 ತ್ಯಾಜ್ಯ ಸಂಗ್ರಹಣಾ ಮಾಗ೯ಗಳಿಂದ ಟ್ರಕ್ ಮೂಲಕ ಪಡೆದು ಕ್ಲೀನ್ ಕೂಗ್೯ ಸಂಸ್ಥೆಯ ಸಹಕಾರದೊಂದಿಗೆ ಮೈಸೂರಿಗೆ ರವಾನಿಸಲಾಗಿದೆ. ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ ಅವರ ಸಹಕಾರದಲ್ಲಿ ಮೈಸೂರಿಗೆ ಕಳುಹಿಸಲಾಗಿದೆ ಎಂದು ದಿನೇಶ್ ತಿಳಿಸಿದ್ದಾರೆ. ಇದು ಕೇವಲ 1 ದಿನಕ್ಕೆ ಸೀಮಿತವಾದ ಅಭಿಯಾನ ಆಗಬಾರದು. ಸ್ವಚ್ಛ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿಯೂ ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವಿವಿಧ ಕಾಯ೯ಯೋಜನೆ ಹಮ್ಮಿಕೊಳ್ಳಲಿದೆ. ಸ್ವಚ್ಚ ಕೊಡಗು ಸುಂದರ ಕೊಡಗು ಅಭಿಯಾನಕ್ಕೆ ಜಿಲ್ಲೆಯಾದ್ಯಂತ ನಿರೀಕ್ಷೆಗೂ ಮೀರಿದ ಸ್ಪಂದನ ದೊರಕಿದ್ದು ಸಮಧಾನ ತಂದಿದೆ ಎಂದು ದಿನೇಶ್ ಹೇಳಿದರು. ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಈ ಅಭಿಯಾನದ ಮೂಲಕ ಕೊಡಗಿನಲ್ಲಿ ಜವಬ್ದಾರಿಯುತ ಪ್ರವಾಸೋದ್ಯಮಕ್ಕೆ ಮತ್ತಷ್ಟು ಒತ್ತು ನೀಡಿದೆ ಎಂದೂ ಅವರು ಹೇಳಿದರು. :: ಸ್ವಚ್ಛ ಕೊಡಗು – ಸುಂದರ ಕೊಡಗು ::  ಸ್ವಚ್ಛ ಕೊಡಗು – ಸುಂದರ ಕೊಡಗು ಎಂಬ ಹೆಸರನ್ನು ಪತ್ರಕತ೯ ಅನಿಲ್ ಹೆಚ್.ಟಿ. ನೀಡಿದ್ದರು. ಅಂತೆಯೇ ಅಭಿಯಾನಕ್ಕೆ ಸಂಬಂಧಿಸಿದಂತೆ ಅನಿಲ್ ಅವರು ಸಾಮಾಜಿಕ ಜಾಲತಾಣದಲ್ಲಿ ಕೈಗೊಂಡ ಪ್ರಚಾರಕ್ಕೆ ಜಿಲ್ಲೆಯ ಹಲವೆಡೆಗಳಿಂದ ವಿವಿಧ ಭಾಷೆಗಳಲ್ಲಿ 58 ವಿಡಿಯೋಗಳನ್ನು ನಟನಟಿಯರು, ಪರಿಸರಪ್ರೇಮಿಗಳು, ಸಾವ೯ಜನಿಕರು, ವಿದ್ಯಾಥಿ೯ಗಳು ಕಳುಹಿಸಿದ್ದು ಕೂಡ ಕೇವಲ 3 ದಿನಗಳಲ್ಲಿಯೇ ರೂಪುಗೊಂಡ ಈ ಅಭಿಯಾನದ ಸಫಲತೆಗೆ ಕಾರಣಗಳಲ್ಲೊಂದಾಯಿತು ಎಂದು ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಪ್ರಧಾನ ಕಾಯ೯ದಶಿ೯ ನಾಸಿರ್ ಅಹಮ್ಮದ್ ಶ್ಲಾಘಿಸಿದ್ದಾರೆ. :: ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ ::  ಸ್ವಚ್ಚ ಕೊಡಗು – ಸುಂದರ ಕೊಡಗು ಅಭಿಯಾನ ಯಶಸ್ವಿಯಾದ ಸಂಬಂಧಿತ ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಈ ಯಶಸ್ವಿಗೆ ಕಾರಣರಾ ಕೊಡಗಿನ ಸವ೯ ಜನತೆಯನ್ನು ಶ್ಲಾಘಿಸಿದ್ದಾರೆ. ಇಂಥ ಅಭಿಯಾನವನ್ನು ಕೆಲವೇ ದಿನಗಳಲ್ಲಿ ಆಯೋಜಿಸಿ ಜಿಲ್ಲೆಯಲ್ಲಿ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಿದ ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ನ ಸವ೯ ಸದಸ್ಯರ ಶ್ರಮವನ್ನೂ ಜಿಲ್ಲಾಧಿಕಾರಿ ಅಭಿನಂದಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.