
ಸುಂಟಿಕೊಪ್ಪ ಅ.17 NEWS DESK : ಬೀದಿನಾಯಿಗಳ ದಾಳಿಗೆ ಜಿಂಕೆ ಮೃತಪಟ್ಟಿರುವ ಘಟನೆ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಂಡೂರು ಗ್ರಾಮದ ಆನೆಕಾಡು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಆನೆಕಾಡು ಅರಣ್ಯ ಪ್ರದೇಶಕ್ಕೆ ಸೇರಿದ ಅಂದಾಜು 20 ವರ್ಷ ಪ್ರಾಯದ ಜಿಂಕೆಯೊಂದರ ಮೇಲೆ ಬೀದಿನಾಯಿಗಳು ದಾಳಿ ಮಾಡಿ ಕೊಂದು ಹಾಕಿದೆ. ಜಿಂಕೆಯ ಕಳೇಬರವು ಅರಣ್ಯದಂಚಿನ ಆನೆ ಕಂದಕದಲ್ಲಿ ಪತ್ತೆಯಾಗಿದೆ. ಸ್ಥಳೀಯ ನಿವಾಸಿಗಳು ಅರಣ್ಯ ಇಲಾಖೆಯವರಿಗೆ ಸೂಚಿಸಿದ ಮೇರೆಗೆ ಸ್ಥಳಕ್ಕೆ ಆನೆಕಾಡು ಅರಣ್ಯ ಇಲಾಖೆಯ ಅರಣ್ಯ ಅಧಿಕಾರಿ ದೇವಯ್ಯ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಜಿ.ಪಂ. ಮಾಜಿ ಸದಸ್ಯ ಆರ್.ಕೆ.ಚಂದ್ರು ವನ್ಯಜೀವಿಗಳ ಮೇಲೆ ನಿಗವಹಿಸುವಂತೆ ಆಗ್ರಹಿಸಿದ್ದಾರೆ.








