ಮಡಿಕೇರಿ ಅ.18 NEWS DESK : ರಾಷ್ಟ್ರೀಯ ಶಿಶು ಕಲ್ಯಾಣ ಸಂಸ್ಥೆಯ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ, ಇನ್ನರ್‍ವೀಲ್, ರೋಟರಿ ಮಿಸ್ಟಿಹಿಲ್ಸ್, ಲಯನ್ಸ್ ಕ್ಲಬ್, ರೆಡ್‍ಕ್ರಾಸ್ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವರ್ಣಚಿತ್ರ ಸ್ಪರ್ಧೆಯು ಅಕ್ಟೋಬರ್, 26 ರಂದು ನಡೆಯಲಿದೆ. ಹೆಸರು ನೋಂದಾಯಿಸಲು ಅ.24 ಕೊನೆಯ ದಿನವಾಗಿದೆ. ಸ್ಪರ್ಧಾ ವಿವರ ಮತ್ತು ಹೆಚ್ಚಿನ ಮಾಹಿತಿಗೆ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ, ಚೇತನ ಚಿಲುಮೆ(ಕೆಎಸ್‍ಆರ್‍ಟಿಸಿ ಬಸ್ಸು ನಿಲ್ದಾಣದ ಹತ್ತಿರ) ಇಲ್ಲಿ ಹಾಗೂ ದೂ.ಸಂ.9880985939, 9480745776 ನ್ನು ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ.










