ನಾಪೋಕ್ಲು ಅ.21 NEWS DESK : ಕರ್ನಾಟಕ ಗಮಕ ಕಲಾ ಪರಿಷತ್ ಮತ್ತು, ಬೆಂಗಳೂರು ಮತ್ತು ದ.ಕ.ಜಿಲ್ಲಾ ಘಟಕದ ವತಿಯಿಂದ ಸುಬ್ರಾಯ ಸಂಪಾಜೆ ಅವರಿಗೆ ಪಾವಂಜೆ ಪುರಸ್ಕಾರ ನೀಡಿ ಗೌರವಿಸಲಾಯಿತು. ಪುತ್ತೂರಿನಲ್ಲಿ ನಡೆದ 10ನೇ ದ.ಕ. ಜಿಲ್ಲಾ ಗಮಕ ಕಲಾ ಸಮ್ಮೇಳನದಲ್ಲಿ ಮಡಿಕೇರಿ ಆಕಾಶವಾಣಿ ಕೇಂದ್ರದ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ಅವರನ್ನು ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕನ್ನಡ ಕಾವ್ಯಗಳ ಆಯ್ದ ಭಾಗಗಳನ್ನು ಕೊಡಗಿನ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಹಾಗೂ ಭಗವದ್ಗೀತೆಯನ್ನು ಆಕಾಶವಾಣಿಯ ಪ್ರಸಾರದಲ್ಲಿ ಗಮಕ ರೂಪದಲ್ಲಿ ಪ್ರಸ್ತುತ ಪಡಿಸಿದ ವಿಶೇಷ ಸಾಧನೆಗಾಗಿ ಕೊಡಗಿನ ಏಕೈಕ ಗಮಕಿ ಸಂಪಾಜೆ ಅವರಿಗೆ ಈ ವಿಶೇಷ ಪುರಸ್ಕಾರ ನೀಡಿ ಗೌರವಿಸಲಾಯಿತು. ಖ್ಯಾತ ಗಮಕಿ ಮುಳಿಯ ಶಂಕರ ಭಟ್ಟ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ ವಹಿಸಿದ್ದರು.
ವರದಿ : ದುಗ್ಗಳ ಸದಾನಂದ.











