
ಮಡಿಕೇರಿ NEWS DESK ಅ.22 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರತಿಷ್ಠಿತ “ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ ಕೊಡಗು ಜಿಲ್ಲೆಯ ಪುರುಷ ಲೇಖಕರು ಬರೆದು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿದ್ದ ದಿ. ಬಿ.ಎಸ್ ಗೋಪಾಲಕೃಷ್ಣರವರ ಜ್ಞಾಪಕಾರ್ಥ ಅವರ ಪುತ್ರ ಅನಂತಶಯನ ಮತ್ತು ಸಹೋದರರು ಪುರುಷ ಲೇಖಕರನ್ನು ಪ್ರೋತ್ಸಾಹಿಸುವ ಸಲುವಾಗಿ ಈ ದತ್ತಿ ಸ್ಥಾಪನೆ ಮಾಡಿರುತ್ತಾರೆ. 2025-26ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಲೇಖಕರು ತಾವು ರಚಿಸಿದ ಪುಸ್ತಕದ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಿ ತಕ್ಕದ್ದು. 2020ರ ನಂತರ ಪ್ರಕಟಿತ ಪುಸ್ತಕಗಳನ್ನು ಮಾತ್ರ ಕಳುಹಿಸಿತಕ್ಕದ್ದು. ಸ್ಪರ್ಧೆಗೆ ಪುಸ್ತಕ ಕಳುಹಿಸುವ ಲೇಖಕ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು. ಓರ್ವ ಲೇಖಕ ಒಂದು ಕೃತಿಯನ್ನು ಮಾತ್ರ ಕಳುಹಿಸತಕ್ಕದ್ದು. ಲಕೊಟೆಯ ಮೇಲೆ *”ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ* ಎಂದು ಬರೆಯತಕ್ಕದ್ದು. ಕೊಡಗು ಜಿಲ್ಲೆಯ ಲೇಖಕರಿಗೆ ಮಾತ್ರ ಅವಕಾಶ. ಪುಸ್ತಕಗಳನ್ನು ಕಳುಹಿಸಲು ಕೊನೆಯ ದಿನಾಂಕ 05.11.2025. ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ _94483 46276. ಇಲ್ಲಿಗೆ ದಿನಾಂಕ 05.11.2025 ರ ಒಳಗಾಗಿ ತಲುಪಿಸಬೇಕೆಂದು ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







