Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಿತ್ತೂರು ರಾಣಿ ಚೆನ್ನಮ್ಮ ಅವರ ಜೀವನ ಸಾಧನೆ ಶ್ಲಾಘನೀಯ : ಗಣ್ಯರ ಅಭಿಮತ*
ಇತ್ತೀಚಿನ ಸುದ್ದಿಗಳು

*ಕಿತ್ತೂರು ರಾಣಿ ಚೆನ್ನಮ್ಮ ಅವರ ಜೀವನ ಸಾಧನೆ ಶ್ಲಾಘನೀಯ : ಗಣ್ಯರ ಅಭಿಮತ*

October 24, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.24 NEWS DESK : ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಧೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಪ್ರತಿಯೊಬ್ಬರಿಗೂ ಮಾದರಿ ಎಂದು ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಕೆ.ಆರ್.ಬಿಂಧು ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಾಲ್ಯದಲ್ಲಿಯೇ ಕತ್ತಿ ವರಸೆ, ಬಿಲ್ಲುಗಾರಿಕೆ, ಕುದುರೆ ಸವಾರಿ ಕಲಿತಿದ್ದ ಕಿತ್ತೂರು ರಾಣಿ ಚೆನ್ನಮ್ಮ ಅವರು 1857 ರ ಸ್ವಾತಂತ್ರ್ಯ ಹೋರಾಟಕ್ಕಿಂತ ಮೊದಲು ಬ್ರಿಟಿಷರ ವಿರುದ್ಧ ಹೋರಾಡಿದ್ದರು ಎಂದು ತಿಳಿಸಿದರು. ‘ಕಪ್ಪ ಕೊಡಬೇಕೆ ಕಪ್ಪ?  ನಿಮಗೇಕೆ ಕೊಡಬೇಕು ಕಪ್ಪ? ನೀವು ಏನು ಒಡಹುಟ್ಟಿದವರೆ, ನೆಂಟರೆ, ಬಂಧುಗಳೇ, ನೀವೇನು ಇಲ್ಲಿ ಉತ್ತಿರ, ಬಿತ್ತಿರ.. ರೈತರು ಕೃಷಿಕರು ಈ ಕೆಲಸ ಮಾಡುತ್ತಾರೆ. ಕಬ್ಬು ತಿನ್ನಲು ಬಿಟ್ಟ ತಪ್ಪಿಗೆ ಕೂಲಿ ಕೊಡಬೇಕಾ, ಕಿತ್ತೂರು ಕಟ್ಟಿ ಬೆಳೆಸಿದ ಆಸ್ತಿ ಏನು, ನಿಮಗೇನು ಇದೆ ಕಪ್ಪ ಕೇಳಲು, ನಾವೇಕೆ ಕೊಡಬೇಕು ನಿಮಗೆ ಕಪ್ಪ ? ಎಂದು ಬ್ರಿಟಿಷರ ವಿರುದ್ದ ಕಿತ್ತೂರು ರಾಣಿ ಚೆನ್ನಮ್ಮ ಅವರು ಕೆಂಡಕಾರಿದ್ದರು ಎಂದು ಕೆ.ಆರ್.ಬಿಂದು ಅವರು ತಿಳಿಸಿದರು. ರಾಜ್ಯದ ಜನಪದ ನಾಯಕಿಯಾಗಿ ಧೈರ್ಯ ಮತ್ತು ದೇಶ ಪ್ರೇಮಕ್ಕೆ ಉದಾಹರಣೆಯಾದ ಚೆನ್ನಮ್ಮ ಕರ್ನಾಟಕದ ವೀರ ವನಿತೆ ನಾರಿ ಶಕ್ತಿಯ ಸಂಕೇತ ಎಂದು ಕೆ.ಆರ್.ಬಿಂದು ಅವರು ವಿವರಿಸಿದರು. ಕಠಿಣ ಪರಿಸ್ಥಿತಿಯಲ್ಲಿಯೂ ಹೋರಾಡಿ ಸ್ಫೂರ್ತಿಯನ್ನು ಕಿತ್ತೂರು ರಾಣಿ ಚೆನ್ನಮ್ಮ ಅವರು ತೋರಿದ್ದರು. ರಾಣಿ ಲಕ್ಷ್ಮೀಬಾಯಿಗಿಂತ ಮೊದಲು 1824 ರಲ್ಲಿ ರಾಜ್ಯದ ಒಂದು ಸಂಸ್ಥಾನದ ರಾಣಿ ಚೆನ್ನಮ್ಮ ನಡೆಸಿದ ಹೋರಾಟ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟ ಆಗಿದೆ ಎಂದು ತಿಳಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಅವರು ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮ ಅವರ ದೇಶ ಭಕ್ತಿ, ರಾಷ್ಟ್ರ ಪ್ರೇಮ ಮೆಚ್ಚುವಂತದ್ದು, ಸ್ವಾತಂತ್ರ್ಯಕ್ಕಾಗಿ ಕಿತ್ತೂರು ರಾಣಿ ಚೆನ್ನಮ್ಮ ಅವರು ಹೋರಾಡಿದ್ದಾರೆ ಎಂದರು. ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರ ಸಾಕಷ್ಟು ಬದಲಾವಣೆಗಳು ಆಗಿದ್ದು, ಆ ನಿಟ್ಟಿನಲ್ಲಿ ನೆಲದ ಕಾನೂನನ್ನು ಪ್ರತಿಯೊಬ್ಬರೂ ಗೌರವಿಸಬೇಕು ಮತ್ತು ಪಾಲಿಸಬೇಕು. ಪ್ರಶ್ನೆ ಮಾಡುವ ಮನೋಭಾವ ಎಲ್ಲರಲ್ಲಿಯೂ ಇರಬೇಕು ಎಂದರು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಮಾತನಾಡಿ ಸ್ವಾತಂತ್ರ್ಯ ಹೋರಾಟಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ದ ಹೋರಾಡಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ಅವರಿಗಿದ್ದ ದೇಶ ಭಕ್ತಿ, ಸಾಹಸ ಪ್ರಜ್ಞೆ ಮೆಚ್ಚುವಂತದ್ದು, ರಾಣಿ ಚೆನ್ನಮ್ಮ ಅವರ ತ್ಯಾಗ ಬಲಿದಾನವನ್ನು ಸದಾ ಸ್ಮರಿಸಬೇಕು ಎಂದರು. ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿದ್ಧರಾಜು ಬೆಳ್ಳಯ್ಯ ಅವರು ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮ ಅವರು ಸ್ವಾತಂತ್ರ್ಯ ಪೂರ್ವದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಜಾಗೃತಿ ಮೂಡಿಸಿದರು. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಗುರಿ ಮತ್ತು ಉದ್ದೇಶ ಇರಬೇಕು ಎಂದು ತಿಳಿಸಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಮಾತನಾಡಿದರು. ಶಿಕ್ಷಕಿ ರಕ್ಷಿತ, ನಿವೃತ್ತ ಶಿಕ್ಷಕರಾದ ಬಿ.ಸಿ.ಶಂಕರಯ್ಯ ಇತರರು ಇದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಸ್ವಾಗತಿಸಿದರು. ಬಿ.ಸಿ.ಶಂಕರಯ್ಯ ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.

 

Share. Facebook Twitter Pinterest LinkedIn Tumblr Email WhatsApp
Previous Article*ಶ್ರಮದಾನದ ಮೂಲಕ ಗ್ರಾಮಸ್ಥರಿಂದ ರಸ್ತೆ ದುರಸ್ತಿ*
Next Article *ಅ.31 ರಂದು ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.