
ಮಡಿಕೇರಿ ಅ.23 NEWS DESK : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಇವರ ಆಶ್ರಯದೊಂದಿಗೆ ಅಕ್ಟೋಬರ್ 31 ರಂದು ಬೆಳಗ್ಗೆ 9.30 ಗಂಟೆಗೆ ಗುಡ್ಡೆಮನೆ ಅಪ್ಪಯ್ಯ ಗೌಡರ ಸ್ಮಾರಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ ಹಾಗೂ ಕೋಟೆ ಆವರಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸರಾಜು, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ವಿಶ್ರಾಂತ ಪ್ರಾಂಶುಪಾಲರು, ಇತಿಹಾಸ ಪ್ರಾಧ್ಯಾಪಕರಾದ ನಂಗಾರು ನಿಂಗರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಂಥರ್‍ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಅಧ್ಯಕ್ಷರಾದ ತೀತೀರ ಧರ್ಮಜ ಉತ್ತಪ್ಪ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ವೈ.ರಾಜೇಶ್, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಕೇಶವ ಕಾಮತ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕೊಡಗು ಜಿ.ಪಂ.ಸಿಇಒ ಆನಂದ ಪ್ರಕಾಶ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಕೊಡಗು ಗೌಡ ಸಮಾಜಗಳ ಒಕ್ಕೂಟಗಳ ಅಧ್ಯಕ್ಷರಾದ ಆನಂದ ಕರಂದ್ಲಾಜೆ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಕೊಲ್ಯದ ಗಿರೀಶ್, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಪಿ.ಸಿ.ಜಯರಾಮ್, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಲಕ್ಷ್ಮೀ ನಾರಾಯಣ ಕಜೆಗದ್ದೆ ಇತರರು ಪಾಲ್ಗೊಳ್ಳಲಿದ್ದಾರೆ.








