
ಮೈಸೂರು NEWS DESK ಅ.26 : ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಇಂದು ಎನ್‌ಇಬಿ ಸ್ಪೋರ್ಟ್ಸ್ ಆ್ಯಂಡ್ ಎಂಟರ್‌ಟೈನ್‌ಮೆಂಟ್ ಲಿಮಿಟೆಡ್, ಭಾರತೀಯ ಅಂಚೆ, ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಮೈಸೂರು ಮ್ಯಾರಥಾನ್ – 2025’ರ ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಯುವ ಸಮೂಹಕ್ಕೆ ಸ್ಫೂರ್ತಿಯಾದರು. ಆರೋಗ್ಯದ ಕುರಿತು ಜಾಗೃತಿ ಮೂಡಿಸಲು ಆಯೋಜಿಸಿದ್ದ ಮ್ಯಾರಥಾನ್ ನಲ್ಲಿ ಓಟಗಾರರೊಂದಿಗೆ ಹೆಜ್ಜೆ ಹಾಕಿ 10 ಕಿ.ಮೀ ದೂರವನ್ನು ಕ್ರಮಿಸಿದರು.









