
ಸೋಮವಾರಪೇಟೆ ಅ.27 NEWS DESK : ನವಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ಅಧ್ಯಕ್ಷ ಉಮೇಶ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದರು. ನಿರಂತರವಾಗಿ ಕನ್ನಡ ಧ್ವಜ ಹಾರಿಸುವ ಸಂಕಲ್ಪದಿಂದ ನೂತನ ಧ್ವಜ ಸ್ತಂಭ ನಿರ್ಮಿಸಲಾಗುತ್ತಿದ್ದು ರಾಜ್ಯೋತ್ಸವದ ದಿನದಂದು ಉದ್ಘಾಟನೆ ಮಾಡಲಾಗುವುದು ಎಂದು ಹೇಳಿದರು. ಸಂಘದ ಪ್ರಧಾನ ಕಾರ್ಯದರ್ಶಿ ಮಹಮದ್ ಶಫಿ ಮಾತನಾಡಿ ನ.1ರ ಬೆಳಿಗ್ಗೆ 8 ಗಂಟೆಗೆ ಪಟ್ಟಣದ ಕಕ್ಕೆಹೊಳೆ ಸಮೀಪವಿರುವ ಬಸವೇಶ್ವರ ವೃತ್ತದ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮೂಲಕ ಅಂದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಪಟ್ಟಣದ ಎಲ್ಲಾ ಪ್ರತಿಮೆಗಳಿಗೂ ಮಾಲಾರ್ಪಣೆ ಮಾಡಿ ನಂತರ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗುವುದೆಂದರು. 10 ಗಂಟೆಗೆ ಖಾಸಗಿ ಬಸ್ ನಿಲ್ದಾಣದಲ್ಲಿ ನಿರ್ಮಿಸುವ ಭವ್ಯ ವೇದಿಕೆಯಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ ನಂತರ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ವಿಭಾಗಗಳಲ್ಲಿ ಕುಣಿಯೋಣು ಬಾರ ಎಂಬ ನೃತ್ಯ ಸ್ಪರ್ಡೆನಡೆಯಲಿದೆ ಎಂದು ತಿಳಿಸಿದರು. ಮದ್ಯಾಹ್ನ 1 ಗಂಟೆಗೆ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಲಿದೆ.ಸಂಜೆ 5.30 ಕ್ಕೆ ಸಮಾರೋಪ ನಡೆಯಲಿದ್ದು, ನಂತರ ರಾಜ್ಯಮಟ್ಟದ ಮುಕ್ತ ನೃತ್ಯ ಕಲಾವೈಭವ ನೃತ್ಯ ಸ್ಪರ್ಧೆ ನಡೆಯಲಿದೆ ವಿಜೇತರಿಗೆ ಪ್ರಥಮ ಬಹುಮಾನ 50 ಸಾವಿರ ನಗದು ಹಾಗೂ ಟ್ರೋಫಿ, ದ್ವಿತೀಯ 25 ಸಾವಿರ ಹಾಗೂ ಟ್ರೋಫಿ ಹಾಗೂ ತೃತೀಯ 15ಸಾವಿರ ಹಾಗೂ ಟ್ರೋಫಿ ನೀಡಲಾಗುವುದು ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಜೀವನ್, ಫೆಲಿಕ್ಸ್ ಹಾಗೂ ಸದಸ್ಯ ರವಿಕುಮಾರ್ ಉಪಸ್ತಿತರಿದ್ದರು.









