
ಮಡಿಕೇರಿ ಅ.27 NEWS DESK : ಕೊಡಗು ಜಿಲ್ಲೆಗೆ ಸಂಬಂಧಿಸಿದ 2025ನೇ ಸಾಲಿನ ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ ವಿಧೇಯಕ ಪರಿಶೀಲನಾ ಸಮಿತಿಯ ಎರಡನೇ ಸಭೆ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿಧಾನ ಸೌಧ ಕೊಠಡಿ ಸಂಖ್ಯೆ 106ರಲ್ಲಿ ನಡೆದ ಸಭೆಯಲ್ಲಿ ಕಂದಾಯ ಸಚಿವರು ಈ ತಿದ್ದುಪಡಿ ವಿಧೇಯಕದ ಕುರಿತು ಮುಂದುವರಿಸಿ ಸಭೆಯಲ್ಲಿ ವಿವರಿಸಿ ಅಧಿಕಾರಿಗಳಿಂದ ವಿವರಣೆ ಪಡೆದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ. ಎಸ್ ಪೊನ್ನಣ್ಣ ಅವರು ಸಭೆಯಲ್ಲಿ ಕೊಡಗು ಜಿಲ್ಲೆಯ ಜಮ್ಮಾ ಬಾಣೆ ಭೂಮಿಗೆ ಸಂಬಂಧಿಸಿದಂತೆ ಸಂಪೂರ್ಣವಾಗಿ ವಿವರಿಸಿ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಸಭೆಯಲ್ಲಿ ಮಡಿಕೇರಿ ಶಾಸಕರು ಡಾ.ಮಂಥರ್ ಗೌಡ, ವಿಧಾನ ಸಭೆಯ ಸದಸ್ಯರುಗಳಾದ ಡಾ. ಸಿ.ಎನ್.ಅಶ್ವಥ್ ನಾರಾಯಣ್, ಡಾ. ಶ್ರೀನಿವಾಸ ಎನ್.ಟಿ, ಭೀಮಾಣ್ಣ ಟಿ ನಾಯ್ಕ, ಪ್ರಾದೇಶಿಕ ಆಯುಕ್ತರಾದ ಶ್ರೀ ಆದಿತ್ಯ ಆಮ್ಲ ಬಿಸ್ವಾಸ್, ಅಪರ ಮುಖ್ಯ ಕಾರ್ಯದರ್ಶಿಗಳು ಕಂದಾಯ ಇಲಾಖೆ ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳು, ಕೊಡಗು ಜಿಲ್ಲಾಧಿಕಾರಿಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಅಧಿಕಾರಿಗಳು, ವಿಧಾನ ಸಭೆಯ ಸಚಿವಾಲಯದ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಜರಿದ್ದರು.









