Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಶ್ರೀಮಂಗಲದಲ್ಲಿ ಸಿಎನ್‍ಸಿ ಕೊಡವ ಜನಜಾಗೃತಿ ಮಾನವ ಸರಪಳಿ : ಸಂವಿಧಾನದಿಂದ ಮಾತ್ರ ಕೊಡವರ ರಕ್ಷಣೆ ಸಾಧ್ಯ : ಎನ್.ಯು.ನಾಚ್ಚಪ್ಪ ಪ್ರತಿಪಾದನೆ : ಸಿಎನ್‍ಸಿ ಹೋರಾಟದ ಮೇಲೆ ವಿಶ್ವಾಸವಿಡಲು ಕರೆ*
ಇತ್ತೀಚಿನ ಸುದ್ದಿಗಳು

*ಶ್ರೀಮಂಗಲದಲ್ಲಿ ಸಿಎನ್‍ಸಿ ಕೊಡವ ಜನಜಾಗೃತಿ ಮಾನವ ಸರಪಳಿ : ಸಂವಿಧಾನದಿಂದ ಮಾತ್ರ ಕೊಡವರ ರಕ್ಷಣೆ ಸಾಧ್ಯ : ಎನ್.ಯು.ನಾಚ್ಚಪ್ಪ ಪ್ರತಿಪಾದನೆ : ಸಿಎನ್‍ಸಿ ಹೋರಾಟದ ಮೇಲೆ ವಿಶ್ವಾಸವಿಡಲು ಕರೆ*

October 27, 20255 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.27 NEWS DESK : ಮಡಿಕೇರಿ ಅ.27 : ಕೊಡವ ನೆಲದ ಆದಿಮಸಂಜಾತ ಏಕ ಜನಾಂಗೀಯ ಆ್ಯನಿಮಿಸ್ಟಿಕ್ ನಂಬಿಕೆಯ ಕೊಡವರ ಸರ್ವಾಂಗೀಣ ವಿಕಾಸ, ಸಬಲೀಕರಣ ಮತ್ತು ರಕ್ಷಣೆ ದೇಶದ ಪವಿತ್ರ ಸಂವಿಧಾನದಿಂದ ಮಾತ್ರ ಸಾಧ್ಯವೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಪ್ರತಿಪಾದಿಸಿದ್ದಾರೆ. ಸಿಎನ್‍ಸಿ ವತಿಯಿಂದ ಕುರ್ಚಿ ತೋಡನಾಡ್ ನ ಶ್ರೀಮಂಗಲದಲ್ಲಿ ನಡೆದ 17ನೇ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶ್ರೇಷ್ಠ ಸಂವಿಧಾನದ ಆಶಯಕ್ಕೆ ಬದ್ಧರಾಗಿ ಕೊಡವರ ಪರವಾಗಿ ನಿರಂತರ ಶಾಂತಿಯುತ ಹೋರಾಟಗಳನ್ನು ರೂಪಿಸುತ್ತಿರುವ ಸಿಎನ್‍ಸಿಯ ಗುರಿ ಮತ್ತು ಹೋರಾಟದ ಬಗ್ಗೆ ವಿಶ್ವಾಸವಿಡುವಂತೆ ಕರೆ ನೀಡಿದರು. ಆದಿಮಸಂಜಾತ ಏಕ ಜನಾಂಗೀಯ ಆ್ಯನಿಮಿಸ್ಟಿಕ್ ನಂಬಿಕೆಯ ಕೊಡವರು ಯಾವುದೇ ಜಾತಿ, ಧರ್ಮದ ಬಂಧನ ಅಥವಾ ಕಳಂಕವಿಲ್ಲದೆ ಸ್ವತಂತ್ರವಾಗಿ ಬದುಕಿದ ಮತ್ತು ಬದುಕುತ್ತಿರುವ ಅತೀ ಅಪರೂಪದ ಸೂಕ್ಷ್ಮ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಕೊಡವ ನೆಲ ಬಿಟ್ಟರೆ ಬೇರೆ ಎಲ್ಲೂ ಕೊಡವರಿಗೆ ಸ್ವಂತ ಸ್ಥಳವಿಲ್ಲ. ಇಂದಿನ ಕಾಲಮಾನದಲ್ಲಿ ಕೊಡವರ ರಕ್ಷಣೆಯಾಗಬೇಕಾಗಿದೆ ಮತ್ತು ಸಂಪೂರ್ಣ ಸಬಲೀಕರಣವಾಗಬೇಕಾಗಿದೆ. ಇದು ದೇಶದ ಸಂವಿಧಾನದಿಂದ ಮಾತ್ರ ಸಾಧ್ಯ ಎಂದು ವಿವರಿಸಿದರು. ಕೊಡವಲ್ಯಾಂಡ್ ಭೂ ರಾಜಕೀಯ ಸ್ವಯಂ ಆಡಳಿತ, ಕೊಡವರಿಗೆ ವಿಶ್ವರಾಷ್ಟ್ರ ಸಂಸ್ಥೆಯ ಇಂಡಿಜಿನಸ್ ಪಿಪಲ್ಸ್ ರೈಟ್ಸ್, ಎಸ್.ಟಿ.ಪಟ್ಟಿಯಲ್ಲಿ ವರ್ಗೀಕರಣ, ಸಿಕ್ಕಿಂನ “ಸಂಘ” ಮತಕ್ಷೇತ್ರದಂತೆ ಕೊಡವರಿಗೆ ಪಾರ್ಲಿಮೆಂಟ್ ಮತ್ತು ಎಸೆಂಬ್ಲಿಯಲ್ಲಿ ವಿಶೇಷ ಪ್ರಾತಿನಿಧ್ಯ ಸಿಗಬೇಕಾದರೆ, ಕೊಡವರ ಪೂರ್ವರ್ಜಿತ ಭೂ ಹಕ್ಕು ಮತ್ತು ಕೊಡವರ ಧಾರ್ಮಿಕ ಸಂಸ್ಕಾರ ತೋಕ್-ಗನ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರೆಯಬೇಕಾದರೆ ಕೊಡವರ ಪ್ರತ್ಯೇಕ ಗುರುತು ರಾಷ್ಟ್ರೀಯ ಜನಗಣತಿಯ ಸಂದರ್ಭ ‘ಕೊಡವ’ ಎಂದು ದಾಖಲೀಕರಣವಾಗಬೇಕು. ಹೀಗೆ ಮಾಡಿದಾಗ ಮಾತ್ರ ನಮಗೆ ಸಂವಿಧಾನ ಬದ್ಧ ಹಕ್ಕು ದೊರೆಯಲಿದೆ ಎಂದರು. 2026-27 ರಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಅಳವಡಿಸಬೇಕು. ಇದರ ಆಧಾರದಡಿ ಮುಂದೆ ಜನಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕ್ಷೇತ್ರ ಪುನರ್ ವಿಂಗಡಣೆಗೆ ಮಾನದಂಡವಾಗಲಿರುವ ಈ ಜನಗಣತಿಯು ಕೊಡವರ ರಾಜಕೀಯ ಸಬಲೀಕರಣ, ಸ್ವಯಂ ನಿರ್ಧಾರದ ಹಕ್ಕು ಸ್ಥಾಪಿಸಲು ಮೆಟ್ಟಿಲಾಗಲಿದೆ. ಅಲ್ಲದೆ ಕೊಡವರ ಧಾರ್ಮಿಕ ಸಂಸ್ಕಾರ ತೋಕ್-ಗನ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರಿಯಲು ಪೂರಕವಾಗಲಿದೆ. ಕೊಡವರು ಯಾವುದೇ ಧರ್ಮ ಅಥವಾ ಜಾತಿಗೆ ಸೇರಿದವರಲ್ಲ. ಇಂದು ಜನಗಣತಿಯೂ ಸೇರಿದಂತೆ ರಾಜ್ಯ ದಾಖಲೆಗಳ ಎಲ್ಲಾ ಕಾಲಂಗಳಲ್ಲಿ ಈ ದೇಶದ ಬಹುಧರ್ಮ, ಪ್ರಭಲಧರ್ಮ ಮತ್ತು ಬಲಾಡ್ಯ ಜಾತಿಯನ್ನು ದೃಷ್ಟಿಯಲ್ಲಿಟ್ಟು ರಚಿಸಲ್ಪಟ್ಟಿರುವ ಧರ್ಮ ಮತ್ತು ಜಾತಿ ಬಗ್ಗೆ ಮಾತ್ರ ಉಲ್ಲೇಖ ಇರುವುದರಿಂದ ಆನಿಮಿಸ್ಟಿಕ್ ನಂಬಿಗೆಯ ಕೊಡವರು ಅನಿವಾರ್ಯವಾಗಿ ಧರ್ಮ ಮತ್ತು ಜಾತಿ ಕಾಲಂಗಳನ್ನು ಒಪ್ಪಿಕೊಂಡು ಕೊಡವ ಎಂದು ದಾಖಲಿಸಬೇಕಾದ ಪರಿಸ್ಥಿತಿ ಬಂದಿದೆ. 1871-72 ರಿಂದ 1931ರ ವರೆಗೆ ನಡೆದ ರಾಷ್ಟ್ರೀಯ ಜನಗಣತಿಯಲ್ಲಿ ಕೊಡವರನ್ನು ಧರ್ಮೇತರ ಮತ್ತು ಜಾತಿಯೇತರ ಜನಾಂಗ/ಮೂಲವಂಶಸ್ಥ (ರೇಸ್) ಎಂದು ದಾಖಲಿಸಲ್ಪಡುವ ಮೂಲಕ ಕೊಡವರ ಪ್ರತ್ಯೇಕ ಅಸ್ತಿತ್ವ ಮತ್ತು ಸ್ವತಂತ್ರ ವ್ಯಕ್ತಿತ್ವವನ್ನು ಗುರುತಿಸಿ ನಮ್ಮ ಹೆಗ್ಗುರುತು ರಾಜ್ಯ ದಾಖಲೆಯಲ್ಲಿ ನಳನಳಿಸುವಂತಾಗಿತ್ತು. ತದನಂತರ ನಮ್ಮನ್ನು 2021ರ ವರೆಗೆ ಪ್ರತಿ ದಶಮಾನಗಳಿಗೊಮ್ಮೆ ನಡೆಸುವ ರಾಷ್ಟ್ರೀಯ ಜನಗಣತಿಯಲ್ಲಿ ಕೊಡವರನ್ನು ಬಲಾಡ್ಯ ಧಾರ್ಮಿಕ ಮತ್ತು ಜಾತಿಯೊಂದಿಗೆ ವಿಲೀನಗೊಳಿಸಿ ನಮ್ಮ ಅಸ್ತಿತ್ವ ಮತ್ತು ಹೆಗ್ಗುರುತು ವಿನಾಶದೊಂದಿಗೆ ಕೊಡವರ ಅಸ್ಮಿತೆ ಮತ್ತು ಸತ್ವವನ್ನು ಧ್ವಂಸ ಮಾಡಲಾಯಿತು. ಮುಂದೆ ಅದು ಕೊಡವರ ಸ್ವಯಂ ನಿರ್ಣಯ ಹಕ್ಕು ಹಾಗೂ ಸಂವಿಧಾನಿಕ ಹಕ್ಕುಗಳ ಧ್ವನಿಯೂ ಪ್ರತಿಪಾಧಿಸಲು ಆಗಲಾರದಷ್ಟು ಕ್ಷೀಣಗೊಂಡು ಧಮನಕ್ಕೊಳಗಾಯಿತು. ಕೊಡವರ ವಿರಳ ಸಂಖ್ಯೆಯು ಕೊಡವರ ಪ್ರತ್ಯೇಕ ಅಸ್ತಿತ್ವ ಮತ್ತು ಹೆಗ್ಗುರುತನ್ನು ಜೋಪಾನ ಮಾಡಲು ವಿಶೇಷ ಹಕ್ಕು ಕೇಳಲೆಬಾರದು, ಕೊಡವರೇನಿದ್ದರು ಬಲಾಡ್ಯ ಜನಸಂಖ್ಯಾ ಬಾಹುಳ್ಯದೊಂದಿಗೆ ಗುರುತಿಸಿಕೊಳ್ಳಬೇಕೆನ್ನುವ ಅವ್ಯಕ್ತ ಕಾರ್ಯಸೂಚಿಯೊಂದು ಪಿತೂರಿ ಮಾಡುತ್ತಾ ಬಂತು. ಕೊಡವರು ಭೂದೇವಿ ಅರ್ಥಾತ್ ಅವರ ಜನ್ಮಭೂಮಿ ಕೊಡವಲ್ಯಾಂಡ್, ಜಲದೇವಿ ಕಾವೇರಿ, ವನದೇವಿ/ದೇವಕಾಡ್, ಪಾರಮಾರ್ಥಿಕ ಮಂದ್, ಧಾರ್ಮಿಕ ಸಂಸ್ಕಾರ, ತೋಕ್-ಗನ್, ಗೆಜ್ಜೆತಂಡ್, ಸೂರ್ಯ-ಚಂದ್ರ, ಪರ್ವತ ದೇವಿ, ಗುರು-ಕಾರೋಣ, ಸ್ವರ್ಗೀಯ ದಿವ್ಯಾತ್ಮಗಳು, ತೂಟಂಗಳ-ಕ್ಯಾಕೋಳ (ಸಮಾಧಿ ಸ್ಥಳ) ಗಳನ್ನು ಪೂಜ್ಯಭಾವನೆಯಿಂದ ಆರಾಧಿಸುತ್ತಾರೆ. ಸಪ್ತಪಧಿ ಇಲ್ಲದ ಮದುವೆ, ಮಂಗಳ ಸೂತ್ರ ಪದ್ಧತಿ ಇಲ್ಲದ (ಮದುವೆಯ ಮುನ್ನದಿನ ರಾತ್ರಿ ಮಧುಮಗಳ ತಾಯಿ ಮಧುಮಗಳ ಕೊರಳಿಗೆ ಪವಿತ್ರ ‘ಪತ್ತಾಕ್’ ಕಟ್ಟುವ ವಿಶಿಷ್ಟ ಪರಂಪರೆ ನಡೆದು ಬಂದಿದೆ.) ಕೊಡವರ ಎಲ್ಲಾ ಶುಭಕಾರ್ಯ, ಅಶುಭಕಾರ್ಯಗಳಲ್ಲಿ ಮದ್ಯ ಸಮರಾಧನೆ ಮತ್ತು ಪಂದಿಕರಿ ಬೋಜನ ಕಡ್ಡಾಯ. ತೋಕ್-ಗನ್ ಎಲ್ಲಾ ಕಾರ್ಯದಲ್ಲೂ ಪೂಜಾ ಪರಿಕರವಾಗಿ ಬಳಸುತ್ತೇವೆ. ಈ ರೀತಿಯ ಸಂಸ್ಕಾರವನ್ನ ಆನಿಮಿಸ್ಟಿಕ್ ನಂಬಿಗೆಯ ಜನರೆಂದು ವಿಶ್ವರಾಷ್ಟ್ರ ಸಂಸ್ಥೆ ಗುರುತಿಸಿದೆ. ಸಂವಿಧಾನವೇ ನಮಗೆ ರಾಜಗುರು, ಧರ್ಮಗುರು. ಆದ್ದರಿಂದ ಕೊಡವರಿಗೆ ರಾಜ್ಯಾಂಗ ಖಾತ್ರಿ ದೊರಕಬೇಕು. ಆ ಮೂಲಕ ಪ್ರಪಂಚದ ಅತ್ಯಂತ ದೊಡ್ಡ ಜನಾಂಗೀಯ ವೈವಿದ್ಯತೆಯ ಮತ್ತು ಬೃಹತ್ ಸಂವಿಧಾನಿಕ ಪಾರ್ಲಿಮೆಂಟರಿ ಪಾರ್ಟಿಸಿಪೇಟರಿ ಪ್ರಜಾತಂತ್ರ ರಾಷ್ಟ್ರವಾದ ಭಾರತದಲ್ಲಿ ನಮ್ಮ ಅಸ್ತಿತ್ವ, ಹೆಗ್ಗುರುತು, ಅಸ್ಮಿತೆ ಉಳಿಯುವುದರೊಂದಿಗೆ ನಮ್ಮ ಜನ್ಮಭೂಮಿಯಲ್ಲಿ ನಮ್ಮ ಚಾರಿತ್ರಿಕ ನಿರಂತರತೆಗೆ ಕಾಯ್ದೆ ಬದ್ಧ ರಕ್ಷಣೆ ದೊರಕಬೇಕಾದರೆ ರಾಷ್ಟ್ರೀಯ ಜನಗಣತಿಯಲ್ಲಿ ಕೊಡವ ಎಂದು ದಾಖಲಿಸಬೇಕು. ಈ ಸಂಬಂಧ ಈಗಾಗಲೇ ಈ ರಾಷ್ಟ್ರದ ನುರಿತ ಸಂವಿಧಾನ ತಜ್ಞರು ಮಾನವ ಶಾಸ್ತ್ರ ವಿಜ್ಞಾನಿಗಳು, ಸಮಾಜ ವಿಜ್ಞಾನಿಗಳು ಮತ್ತು ರಾಜಕೀಯ ಶಾಸ್ತ್ರ ವಿಜ್ಞಾನಿಗಳ ಜೊತೆ ಸಂಪರ್ಕ ಮತ್ತು ಚರ್ಚೆಯಲ್ಲಿ ತೊಡಗಿಸಿಕೊಂಡಿದ್ದೇವೆ ಎಂದು ಇದೇ ಸಂದರ್ಭ ಎನ್.ಯು.ನಾಚಪ್ಪ ಹೇಳಿದರು. ಹೊರ ರಾಷ್ಟ್ರದ ಬಾಂಗ್ಲದೇಶಿ ರೋಹಿಂಗ್ಯಗಳಿಗೆ ನೆಲೆ ಕಲ್ಪಿಸಲು ಅವರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿ ಮುಂದೆ ಜನಗಣತಿ ಸಂದರ್ಭ ಅವರನೆಲ್ಲ ಕೊಡವ ಎಂದು ದಾಖಲಿಸಿ ಮತಬ್ಯಾಂಕ್ ವೃದ್ಧಿ ಮಾಡಿಕೊಂಡು ಅವರ ಜನಸಂಖ್ಯಾ ವೃದ್ಧಿಯನ್ನು ತೋರಿಸಿ ಮುಂದೆ ಕೊಡಗಿಗೆ ದುಪ್ಪಟ್ಟು ಮತದಾರರ ಆಧಾರದಲ್ಲಿ ಪಾರ್ಲಿಮೆಂಟ್ ಸೀಟ್ ಬೇಕೆಂದು ಎರಡು ರಾಷ್ಟ್ರೀಯ ರಾಜಕೀಯ ಪಕ್ಷಗಳು ಲಜ್ಜೆಗೇಡಿ ಮತಭಿಕ್ಷೆ ಕಾರ್ಯದಲ್ಲಿ ತೊಡಗಿದ್ದು, ಇದಕ್ಕಾಗಿ ಕೊಡವರ ಭೂಮಿಗಳನ್ನು ಬಲವಂತ ತೆರವುಗೊಳಿಸಿ ಅಲ್ಲಿ ಇವರಿಗೆಲ್ಲ ಭೂಮಿ, ವಸತಿ ನಿರ್ಮಿಸುವ ಒಳಸಂಚು ನಡೆಲಾಗುತ್ತಿದೆ. ಇದಕ್ಕೆ ಪ್ರತಿಭಟಿಸಿದರೆ, ಕೊಡಗಿನಲ್ಲಿ ಕಾರ್ಮಿಕರ ಕೊರತೆಯ ನೆಪ ತೋರಿಸಲಾಗುತ್ತದೆ. ಮುಂದೆ ಹರಾಜಕತೆ ನಿರ್ಮಾಣವಾಗಿ ಸ್ಥಳೀಯರಿಗೆ ರಕ್ಷಣೆ ಇಲ್ಲದಾಗುತ್ತದೆ ಎಂದು ನಾಚಪ್ಪ ಕಳವಳ ವ್ಯಕ್ತಪಡಿಸಿದರು. ಸರಿ ಕಾರ್ಮಿಕರ ಕೊರತೆ ಇದ್ದರೆ ಟರ್ಕಿ ದೇಶದ ವಲಸಿಗ ಕಾರ್ಮಿಕರನ್ನು ಪ್ಯಾರಿಸ್‍ನಲ್ಲಿ ಗೆಸ್ಟ್ ವರ್ಕರ್ ಎಂದು ಪರಿಗಣಿಸಲಾಗಿದೆ. ಮೋದಿ-ಶೇಖ್ ಹಸಿನಾ ಒಪ್ಪಂದ 2015ರಲ್ಲಿ ಡಾಕಾದಲ್ಲಿ ನಡೆದಾಗ ಈ ಗೆಸ್ಟ್ ವರ್ಕರ್ನೀತಿ ಮುನ್ನಲೆಗೆ ಬಂದಿದೆ. ಅದೇ ರೀತಿ ಕೊಡಗಿನಲ್ಲಿ ಹೊರ ರಾಜ್ಯದ ಕಾರ್ಮಿಕರನ್ನು ಗೆಸ್ಟ್ ವರ್ಕರ್ ಪರ್ಮಿಟ್ ಮೇಲೆ ಆಹ್ವಾನಿಸಿ ಕೆಲಸ ಮುಗಿದ ನಂತರ ಅವರ ಊರುಗಳಿಗೆ, ದೇಶಗಳಿಗೆ ಹಿಂತಿರುಗಬೇಕು. ಪುನಃ ಕೃಷಿ ವರ್ಷ ಆರಂಭದಲ್ಲಿ ಅವರ ಗೆಸ್ಟ್ ವರ್ಕರ್ ಪರ್ಮಿಟ್ ನವೀಕರಿಸಬೇಕು, ಈ ನಿಯಮ ಜಾರಿಯಾಗಬೇಕು ಎಂದು ಎನ್.ಯು.ನಾಚಪ್ಪ ಸಲಹೆ ನೀಡಿದರು. 2026-27ರ 16ನೇ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್‍ಟಿ ಪಟ್ಟಿಯಲ್ಲಿ ವರ್ಗೀಕರಿಸಬೇಕು. ಕೊಡವರ ಧಾರ್ಮಿಕ ಸಂಸ್ಕಾರ ತೋಕ್-ಗನ್ ಹಕ್ಕು ಚಿರಸ್ಥಾಯಿಯಾಗಿ ಉಳಿಸಬೇಕು, ಸಿಕ್ಕಿಂನ ಬೌದ್ಧ ಸನ್ಯಾಸಿಗಳಿಗೆ ನೀಡಿದ “ಸಂಘ” ಕ್ಷೇತ್ರದಂತೆಯೇ 202627 ರ ಮತಕ್ಷೇತ್ರ ಪುನರ್ ವಿಂಗಡಣೆ ನಿರ್ಣಯದ ಸಂದರ್ಭ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ವಿಶೇಷ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿನಡಿ ಆದಿಮಸಂಜಾತ (ಆನಿಮಿಸ್ಟಿಕ್) ಕೊಡವ ಸಮುದಾಯವನ್ನು ಸಂರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರಕಾರದ ಗಮನ ಸೆಳೆದರು. ಅಲ್ಲದೆ ಜಾತಿ ಜನಗಣತಿಯ ಮೂರೂ ಕಾಲಂಗಳಲ್ಲಿ ಕೊಡವರು ‘ಕೊಡವ’ ಎಂದು ನಮೂದಿಸುವಂತೆ ಕರೆ ನೀಡಿದರು.
*ನ.5 ರಂದು ಮತ್ತು 10 ರಂದು ಜನಜಾಗೃತಿ*
18ನೇ ಕೊಡವ ಜನಜಾಗೃತಿ ಮಾನವ ಸರಪಳಿ ನವೆಂಬರ್ 5ರಂದು ಬುಟ್ಟಂಗಾಲದಲ್ಲಿ ಮತ್ತು 19ನೇ ಮಾನವ ಸರಪಳಿ ನ.10 ರಂದು ಬೆಳಿಗ್ಗೆ 10.30 ಗಂಟೆಗೆ ಅಂಜಿಗೇರಿನಾಡ್‍ನ ಪುದಿಕೇರಿ (ಹುದಿಕೇರಿ) ಯಲ್ಲಿ ನಡೆಯಲಿದೆ ಎಂದು ಎನ್.ಯು.ನಾಚಪ್ಪ ತಿಳಿಸಿದರು. ಇಲ್ಲಿಯವರೆಗೆ ಬಿರುನಾಣಿ, ಟಿ.ಶೆಟ್ಟಿಗೇರಿ, ಕಡಂಗ, ಕಕ್ಕಬ್ಬೆ, ಬಾಳೆಲೆ, ಪೊನ್ನಂಪೇಟೆ, ಮಾದಾಪುರ, ಸುಂಟಿಕೊಪ್ಪ, ಸಿದ್ದಾಪುರ, ನಾಪೋಕ್, ಗೋಣಿಕೊಪ್ಪ, ವಿರಾಜಪೇಟೆ, ಮೂರ್ನಾಡ್, ಚೇರಂಬಾಣೆ, ಚೆಟ್ಟಳ್ಳಿ ಹಾಗೂ ಅಮ್ಮತ್ತಿಯಲ್ಲಿ ಕೊಡವ ಮಾನವ ಸರಪಳಿ ಯಶಸ್ವಿಯಾಗಿ ನಡೆದಿದೆ ಎಂದರು. ಅಜ್ಜಮಾಡ ಸಾವಿತ್ರಿ, ಅಜ್ಜಮಾಡ ಅಕ್ಕಮ್ಮ, ಬಾಚರಣಿಯಂಡ ಚಿಪ್ಪಣ್ಣ, ಅಜ್ಜಮಾಡ ಮೋಹನ್, ಚೊಟ್ಟೆಯಂಡಮಾಡ ಉದಯ, ಅಜ್ಜಿಕುಟ್ಟೀರ ಲೋಕೇಶ್, ಬೊಟ್ಟಂಗಡ ಗಿರೀಶ್, ಕಿರಿಯಮಾಡ ಶೆರಿನ್, ಇಟ್ಟೀರ ರಾಜು, ಅಜ್ಜಮಾಡ ರಂಜಿ, ಅಪ್ಪೆಂಗಡ ಮಾಲೆ ಪೂಣಚ್ಚ, ಬೊಳ್ಳಜಿರ ಅಶೋಕ್, ಅಜ್ಜಮಾಡ ಬೋಪಣ್ಣ, ಮಾಣಿರ ಸಂಪತ್, ಅಯ್ಯಮಾಡ ಚಿಟ್ಟು, ಬೊಳಿಯಂಗಡ ನಿಶಾಂತ್, ಮದ್ರೀರ ವಿಷ್ಣು, ಚಂಗುಲಂಡ ರಾಜಪ್ಪ, ಮಚ್ಚಮಾಡ ಮೇದಪ್ಪ, ಚೊಟ್ಟೆಯಂಡಮಾಡ ಸತೀಶ್, ಚೊಟ್ಟಂಗಡ ಜಪ್ಪು, ಚಿರಿಯಪಂಡ ಬೋಪಣ್ಣ, ಕಳ್ಳಂಗಡ ವಿಠಲ್, ಅಜ್ಜಮಾಡ ವಿಠಲ್, ಚೊಟ್ಟೆಯಂಡಮಾಡ ದೀಪಕ್, ಬೊಟ್ಟಂಗಡ ನವೀನ್, ಕುಂಞಂಗಡ ಬೋಸ್, ಕೊಟ್ರಂಗಡ ಪೊನ್ನಣ್ಣ, ಅಯ್ಯಮಾಡ ಸೋಮೇಶ್, ಮಾಣಿರ ಮುತ್ತಪ್ಪ, ಕಳ್ಳಂಗಡ ಶರಣು, ಚಂಗುಲಂಡ ಸುರೇಶ್, ನಲ್ಲಪಟ್ಟಿರ ಬೊಳ್ಳಿಯಪ್ಪ, ಬೊಟ್ಟಂಗಡ ಶರತ್, ಬಾಚಂಗಡ ಮುದ್ದು, ಕಳ್ಳಂಗಡ ಪೊನ್ನಣ್ಣ, ಕಾಳಿಮಾಡ ಹರೀಶ್ ಅಣ್ಣಯ್ಯ, ಅಪ್ಪಂಡೇರಂಡ ಸುರೇಶ್, ಮಚ್ಚಮಾಡ ಕರುಂಬಯ್ಯ, ಬಾದುಮಂಡ ಕಟ್ಟಿ, ಅಜ್ಜಮಾಡ ಅಯ್ಯಣ್ಣ, ಮನ್ನೆರ ಮೊಣ್ಣಪ್ಪ, ದೇಕಮಾಡ ಬೊಳ್ಳಿಯಪ್ಪ, ತೀತಿರ ಸಾಬು ಮೋಟಯ್ಯ, ಅಜ್ಜಮಾಡ ವಿಶ್ವನಾಥ್, ಕಟ್ಟೇರ ಉದಯ, ಕಲ್ಲಂಗಡ ಕಿಟ್ಟು ಬೊಳ್ಳಿಯಪ್ಪ, ಬಾಚಂಗಡ ಭವಿ ಕುಮಾರ್, ನಾಯಕಂಡ ರಾಜ, ಅಜ್ಜಮಾಡ ಜಗದೀಶ್ ಬೋಪಣ್ಣ ಪಾಲ್ಗೊಂಡು ಪ್ರತಿಜ್ಞಾವಿಧಿಯೊಂದಿಗೆ ಸಿಎನ್‍ಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. ರಾಷ್ಟ್ರಗೀತೆ ಜನ-ಗಣ-ಮನ ಪಠಣದೊಂದಿಗೆ ಕಾರ್ಯಕ್ರಮ ಸಮಾರೋಪಗೊಂಡಿತು.

Share. Facebook Twitter Pinterest LinkedIn Tumblr Email WhatsApp
Previous Article*ಶ್ರದ್ಧಾಂಜಲಿಗಾಗಿ ಕಾಯುತ್ತಿರುವ ಶ್ರದ್ಧಾಂಜಲಿ ವಾಹನ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
Next Article *ಚೇನಂಡ ಕಪ್ ಹಾಕಿ ಉತ್ಸವ : 450ಕ್ಕೂ ಹೆಚ್ಚು ಕೊಡವ ಕುಟುಂಬ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ*

Related Posts

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

ವಿರಾಜಪೇಟೆ NEWS DESK ಫೆ.12 : ವಿದ್ಯಾರ್ಥಿಗಳಲ್ಲಿ “ವಿವಿಧತೆಯಲ್ಲಿ ಏಕತೆ”ಯ ಮಹತ್ವವನ್ನು ಬೆಳೆಸುವ ಉದ್ದೇಶದಿಂದ ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ ನರ್ಸರಿ…

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.