
ವಿರಾಜಪೇಟೆ ಅ.28 NEWS DESK : ಮೈಸೂರಿನ ವಿ.ಯನ್. ಯೋಧ ಮಾರ್ಷಲ್ ಆರ್ಟ್ಸ್ ಅಕಾಡೆಮಿ ವತಿಯಿಂದ ಮೈಸೂರಿನ ಟೆರೆಷಿಯನ್ ಕಾಲೇಜಿನಲ್ಲಿ ನಡೆಸಲಾದ ಐದನೇ ರಾಷ್ಟ್ರೀಯ ಮುಕ್ತ ಕರಾಟೆ ಪಂದ್ಯಾಳಿಯಲ್ಲಿ ವಿರಾಜಪೇಟೆಯ ಗೋಜೋ ಕಾಯ್ ಕರಾಟೆ ಶಾಲೆಯ ವಿದ್ಯಾರ್ಥಿಗಳು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಕತಾ ಮತ್ತು ಕುಮಿತೆ ವಿಭಾಗದಲ್ಲಿ 22 ಚಿನ್ನ, 27 ಬೆಳ್ಳಿ, 26 ಕಂಚಿನ ಪದಕಗಳನ್ನು ಪಡೆದುಕೊಂಡು ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಸ್ಪರ್ಧೆಯಲ್ಲಿ 52 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇವರಿಗೆ ಕರಾಟೆ ಶಿಕ್ಷಕರಾದ ಸೆನ್‍ಸಾಯಿ ಎಂ.ಬಿ. ಚಂದ್ರನ್ ತರಬೇತಿ ನೀಡಿದ್ದಾರೆ.









