
ಮಡಿಕೇರಿ ಅ.29 NEWS DESK : ಪೊನ್ನಂಪೇಟೆ ತಾಲ್ಲೂಕಿನಲ್ಲಿ ಆಯೋಜಿಸಿದ ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿದರು. ತಾಲ್ಲೂಕು ಪಂಚಾಯತ್ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರು, ಸಮಿತಿಯ ಸದಸ್ಯರೊಂದಿಗೆ ಹಲವು ವಿಷಯಗಳ ಕುರಿತು ಚರ್ಚಿಸಿದರು. ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜವಾಬ್ದಾರಿಗಳನ್ನು ಹಾಗೂ ನಿಭಾಯಿಸಬೇಕಾದ ಕಾರ್ಯಕ್ರಮಗಳನ್ನು ಮತ್ತು ರೂಪಿಸಬೇಕಾದ ವಿಷಯಗಳ ಬಗ್ಗೆ ವಿಶೇಷ ಮಾಹಿತಿಯನ್ನು ಸಭೆಗೆ ತಿಳಿಸಿದರು. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ವೈಸ್ ಚೇರ್ ಪರ್ಸನ್ ಬಾಲಚಂದ್ರ ನಾಯರ್ ಹಾಗೂ ಸಮಿತಿಯ ಪದಾಧಿಕಾರಿಗಳದ ಕೊಲ್ಲಿರ ಬೋಪಣ್ಣ, ಅಣ್ಣೀರ ಹರೀಶ್, ಪಂದಿಕಂಡ ದಿನೇಶ್ ಕುಶ, ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿವಿಧ ಗ್ರಾಮ ಪಂಚಾಯಿತಿಯ ಅಧ್ಯಕ್ಷರುಗಳು, ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.









