Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ : ಹೆಸರು ನೋಂದಣಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ : ಹೆಸರು ನೋಂದಣಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮನವಿ*

ಅಕ್ಟೋಬರ್ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.29 NEWS DESK : ‘ಸರ್ಕಾರದ ಬೆಂಬಲ ಬೆಲೆಯಡಿ ಜಿಲ್ಲೆಯಲ್ಲಿ ಭತ್ತ ಹಾಗೂ ರಾಗಿಯನ್ನು ಖರೀದಿ ಮಾಡಲಾಗುತ್ತಿದ್ದು, ಈ ಸಂಬಂಧ ರೈತರ ಹೆಸರು ನೋಂದಣಿ ಕಾರ್ಯ ಈಗಾಗಲೇ ಆರಂಭವಾಗಿದೆ. ಜಿಲ್ಲೆಯ ರೈತರು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನಡೆದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಆದೇಶದಂತೆ 2025-26ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಹಾಗೂ ರಾಗಿ ಖರೀದಿ ಮಾಡಲಾಗುತ್ತಿದ್ದು, ಈ ಅವಕಾಶ ಸದ್ಬಳಕೆಗೆ ಮನವಿ ಮಾಡಿದರು. ಜಿಲ್ಲೆಯಲ್ಲಿ ಭತ್ತ ಮತ್ತು ರಾಗಿಯನ್ನು ಬೆಂಬಲ ಬೆಲೆಯಡಿ ಖರೀದಿಸಲಾಗುತ್ತಿದ್ದು, ಆಹಾರ, ನಾಗರಿಕ ಸರಬರಾಜು ನಿಗಮ ನಿಯಮಿತರವರನ್ನು ಖರೀದಿ ಏಜೆನ್ಸಿಯನ್ನಾಗಿ ಸರಕಾರ ನೇಮಕ ಮಾಡಿದ್ದು, ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು. ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲ ಆಗುವಂತೆ 5 ಕಡೆಗಳಲ್ಲಿ ಮಡಿಕೇರಿ ಎಪಿಎಂಸಿ ಆವರಣ, ಕುಶಾಲನಗರ ಎಪಿಎಂಸಿ ಆವರಣ, ಗೋಣಿಕೊಪ್ಪ ಎಪಿಎಂಸಿ ಆವರಣ ಹಾಗೂ ಸೋಮವಾರಪೇಟೆ ಎಪಿಎಂಸಿ ಮಾರ್ಕೇಟ್ ಆವರಣದಲ್ಲಿ ಮತ್ತು ವಿರಾಜಪೇಟೆ ಪಟ್ಟಣದ ತಾಲ್ಲೂಕು ಕೃಷಿ ಇಲಾಖೆ ಕಚೇರಿಯಲ್ಲಿ ಖರೀದಿ ಕೇಂದ್ರ ತೆರೆಯಲಾಗಿದ್ದು, ರೈತರು ನೋಂದಣಿ ಕೇಂದ್ರಗಳಲ್ಲಿಯೇ ತಮ್ಮ ಭತ್ತ ನೀಡುವಂತಾಗಬೇಕು ಎಂದರು. ರೈತರ ನೋಂದಣಿ ತಾಂತ್ರಿಕ ತೊಂದರೆಗಳು ಕಂಡುಬಂದಲ್ಲಿ ಕೂಡಲೇ ಸರಿಪಡಿಸಬೇಕು. ಆ ನಿಟ್ಟಿನಲ್ಲಿ ಕೃಷಿಕರಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಹಾಗೂ ರಾಗಿ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ಫ್ರೂಟ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಎನ್‍ಪಿಸಿಐ ಬ್ಯಾಂಕ್ ಖಾತೆಯ ವಿವರಗಳನ್ನು ನೀಡಬೇಕಿದೆ ಎಂದು ಅವರು ತಿಳಿಸಿದರು. ಭತ್ತದ ಖರೀದಿ ನೋಂದಣಿ ಕುರಿತು ಗ್ರಾಮೀಣ ಭಾಗದಲ್ಲಿ ರೈತರಿಗೆ, ಮುಖಂಡರಿಗೆ ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಮಾಹಿತಿ ನೀಡುವಂತೆ ಹಾಗೂ ರೈತರ ನೋಂದಣಿ ಕೇಂದ್ರಗಳು ಹಾಗೂ ಭತ್ತ ಖರೀದಿ ಕೇಂದ್ರಗಳ ಕುರಿತು ವಿವರಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಅವರು ಖರೀದಿ ಏಜೆನ್ಸಿಯವರಿಗೆ ತಿಳಿಸಿದರು. ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಮಂಟೇಸ್ವಾಮಿ ಅವರು ಮಾಹಿತಿ ನೀಡಿ ಕೆಲವೇ ದಿನಗಳಲ್ಲಿ ಭತ್ತ/ ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ ಗೆ 2369 ರೂ. ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಲ್ ಗೆ 4886 ರೂ ನಿಗದಿಪಡಿಸಲಾಗಿದೆ ಎಂದರು. ಭತ್ತವನ್ನು ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು, ತಾವು ಬೆಳದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ ಎಂದು ಆಹಾರ ಇಲಾಖೆಯ ಜಂಟಿ ನಿರ್ದೇಶಕರು ಮಾಹಿತಿ ನೀಡಿದರು. ಸರಕಾರವು ಪೌಷ್ಟಿಕಾಂಶತೆಯಿಂದ ಕೂಡಿದ ಸಾರವರ್ದಿತ ಅಕ್ಕಿಯನ್ನು ಫಲಾನುಭವಿಗಳಿಗೆ ನೀಡಲು ಉದ್ದೇಶಿಸಿದ್ದು, ಈ ಸಂಬಂಧ ಅಕ್ಕಿ ಗಿರಣಿಗಳಲ್ಲಿ ಹಲ್ಲಿಂಗ್ ಮಾಡುವಾಗ ಸಾರವರ್ದಿತ ಅಕ್ಕಿಯನ್ನು ತಯಾರು ಮಾಡಲು ಕಡ್ಡಾಯವಾಗಿ ಅಕ್ಕಿ ಗಿರಣಿ ಮಾಲೀಕರುಗಳು ಬ್ಲೆಂಡಿಂಗ್ ಮಿಷನ್ ಅನ್ನು ಅಳವಡಿಸಲು ಹಾಗೂ ಅಳವಡಿಸದ ಅಕ್ಕಿಗಿರಣಿಗಳಿಗೆ ಸರಕಾರದ ಆದೇಶದಂತೆ ಹಲ್ಲಿಂಗ್ ಗೆ ಭತ್ತವನ್ನು ನೀಡಲು ನೀಡಲು ಸಾದ್ಯವಿರುವುದಿಲ್ಲ ಎಂದು ಸಭೆಯಲ್ಲಿ ಆಹಾರ ಇಲಾಖೆ ಜಂಟಿ ನಿರ್ದೇಶಕರು ಮಾಹಿತಿ ನೀಡಿದರು. ಸಭೆಯಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಡಿ.ಎಸ್.ಸೋಮಶೇಖರ, ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯ ಸಹಾಯಕ ನಿರ್ದೇಶಕರಾದ ಹಂಪಣ್ಣ, ಆಹಾರ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಕಿರಣ್, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ವ್ಯವಸ್ಥಾಪಕರಾದ ಎಚ್.ಎಂ.ನಾಗನಾಯ್ಕ, ಎಪಿಎಂಸಿ ಕಾರ್ಯದರ್ಶಿ ಅನಿಲ್, ಆಹಾರ ನಿರೀಕ್ಷಕರಾದ ಯಶಸ್ವಿನಿ, ಸ್ವಾತಿ, ವೀಣಾ, ಪಿ.ಆರ್.ನೀನಾಕುಮಾರಿ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿರೀಕ್ಷಕರಾದ ನರೇಂದ್ರ, ಮೈಕಲ್, ಕಿರಣ್, ಇತರರು ಇದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.