ಮಡಿಕೇರಿ ನ.3 NEWS DESK : ಕೊಡಗಿನಲ್ಲಿ ನ.11 ರಿಂದ ಡಿ.31ರ ತನಕ ನಡೆಯಲಿರುವ ಕಲಾ ಉತ್ಸವ-2025 ಕಾರ್ಯಕ್ರಮದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕೃಷ್ಣಾದಲ್ಲಿ ಅನಾವರಣಗೊಳಿಸಿದರು. ಈ ಸಂದರ್ಭ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಯುವ ಕಾಂಗ್ರೆಸ್ ಅಧ್ಯಕ್ಷ ಶಬೀರ್, ಕಲಾವಿದ ಸಾದಿಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. 2017 ರಿಂದ, ಸತತವಾಗಿ ಈ ಕಾರ್ಯಕ್ರಮ ವಾರ್ಷಿಕವಾಗಿ ನಡೆಯುತ್ತಿದ್ದು ರಾಜ್ಯ ಹೊರರಾಜ್ಯಗಳಿಂದ ಕಲಾವಿದರು ಆಗಮಿಸಿ ತಮ್ಮ ಕಲಾಕೃತಿಯನ್ನು ಪ್ರದರ್ಶಿಸುತ್ತಾರೆ.











