
ನಾಪೋಕ್ಲು ನ.3 NEWS DESK : ಕನ್ನಡ ಸಾಹಿತ್ಯ ಪರಿಷತ್ತು ಮಡಿಕೇರಿ ತಾಲ್ಲೂಕು, ಕನ್ನಡ ಸಾಹಿತ್ಯ ಪರಿಷತ್ತು ನಾಪೋಕ್ಲು ಹೋಬಳಿ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಸಂಯುಕ್ತಾಶ್ರಯದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಪ್ರಾಂಶುಪಾಲರಾದ ಕೆ.ಡಿ.ನೀತಾ, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಗತಿಯ ಮೂಲಕ ಕನ್ನಡಾಭಿಮಾನವನ್ನು ಬೆಳೆಸಿಕೊಳ್ಳಬೇಕು. ತಮ್ಮ ಶೈಕ್ಷಣಿಕ ಪ್ರಗತಿಯಲ್ಲಿ ಗುರಿ ತಲುಪಿ ದೇಶ-ವಿದೇಶಗಳಲ್ಲಿ ಹೆಸರುಗಳಿಸಿರೆಂದು ಆಶಿಸಿದರು. ಮಡಿಕೇರಿ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕಡ್ಲೆರ ತುಳಸಿ ಮೋಹನ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮೊಳಗೆ ಅಡಗಿರುವ ಕಲೆಯನ್ನು ಹೊರತರಲು ಇಂತಹ ಸಂಭ್ರಮಾಚರಣೆಗಳು ಅವಶ್ಯಕ ಎಂದು ಹೇಳಿದರು, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ಬಾಳೆಯಡ ದಿವ್ಯಾ ಮಂದಪ್ಪ ಮಾತನಾಡಿ, ವಿದ್ಯಾರ್ಥಿಗಳ ಶಿಸ್ತು ಶಿಕ್ಷಣ ಮತ್ತು ಗುರಿ ಸಾಧನೆಗೆ ದಾರಿಯಾಗುವುದು ಎಂದು ಹೇಳಿದರು. ನಾಪೋಕ್ಲು ಹೋಬಳಿಮಟ್ಟದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೆರವಂಡ ಉಮೇಶ್ ರಾಜ್ಯೋತ್ಸವದ ಕುರಿತು ಮಾತನಾಡಿ, ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಹರಸಿದರು. ಕನ್ನಡ ಶಿಕ್ಷಕಿ ರೂಪ ಮಾತನಾಡಿ, ಕನ್ನಡದ ಹೆಸರು ಜಗಕೆ ಸಾರುವಂತೆ ಮಾಡಿದ ಕನ್ನಡದ ಕವಿಪುಂಗವರನ್ನು ನೆನಪಿಸಿಕೊಂಡರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಕವನ ರಚನೆ, ಚಿತ್ರಕಲೆ ಹಾಗೂ ಸಮೂಹ ಗಾಯನ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು ದೈಹಿಕ ಶಿಕ್ಷಣ ಶಿಕ್ಷಕಿ ಶ್ಯಾಮಿಲಿ ಇವರು ಬಹುಮಾನ ವಿಜೇತರನ್ನು ತಿಳಿಸಿದರು. ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನವನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ಕರ್ನಾಟಕವನ್ನು ಹೊಗಳಿ ಕೊಂಡಾಡುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಬೋಧಕ ಬೋಧಕೇತರ ವೃಂದದವರು ಭಾಗವಹಿಸಿದ್ದರು. ವಿದ್ಯಾರ್ಥಿಗಳಾದ ನಿಶಾ ಪ್ರಾರ್ಥಿಸಿದರು, ಕೀರ್ತನ ಸ್ವಾಗತಿಸಿ, ಅಂಜಲಿ ನಿರೂಪಿಸಿ ಪ್ರೀತೇಶ್ ವಂದಿಸಿದರು.
ವರದಿ : ದುಗ್ಗಳ ಸದಾನಂದ.









