ಸೋಮವಾರಪೇಟೆ NEWS DESK ನ.3 : ಸಿ ಅಂಡ್ ಡಿ ಭೂಮಿ ಕಾನೂನು ವಿರೋಧಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರಪೇಟೆಯಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ರಸ್ತೆತಡೆ ನಡೆಸಿದ ಪ್ರತಿಭಟನಾಕಾರರು ಸರಕಾರ, ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸೋಮವಾರಪೇಟೆ ತಾಲೂಕು ರೈತ ಹೋರಾಟ ಸಮಿತಿ, ರೈತ ಸಂಘ ಮತ್ತಿತರ ರೈತ ಸಂಘಟನೆಗಳ ನೇತೃತ್ವದಲ್ಲಿ ಜೆ.ಸಿ.ವೇದಿಕೆಯಲ್ಲಿ ಬಹಿರಂಗ ಪ್ರತಿಭಟನಾ ಸಭೆ ನಡೆಯಿತು. ಸಿ ಅಂಡ್ ಡಿ ಭೂಮಿ ಕಾನೂನು ತಿದ್ದುಪಡಿಯಿಂದ ಕೃಷಿಕರ ನೆಮ್ಮದಿ ಭಂಗವಾಗಿದೆ ಎಂದು ಸಂಘಟನೆಗಳ ಪ್ರಮುಖರು ಆರೋಪಿಸಿದರು.










