ಮಡಿಕೇರಿ ನ.3 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು, ಮೂರ್ನಾಡು ಹೋಬಳಿ ಘಟಕ, ಮೂರ್ನಾಡು ಗ್ರಾಮ ಪಂಚಾಯಿತಿ, ಪಿ.ಎಂ.ಶ್ರೀ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನ.6 ರಂದು ಮೂರ್ನಾಡುವಿನಲ್ಲಿ 70ನೇ ಕನ್ನಡ ರಾಜ್ಯೋತ್ಸವ “ಕನ್ನಡ ಹಬ್ಬ” ಸಂಭ್ರಮದಿಂದ ನಡೆಯಲಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕನ್ನಡ ಸಾಹಿತ್ಯ ಪರಿಷತ್ ನ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಅವರು ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಮೂರ್ನಾಡುವಿನ ಪಿ.ಎಂ.ಶ್ರೀ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಭವ್ಯ ಮೆರವಣಿಗೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವಿ.ದೀರ್ಘಕೇಶಿ ಶಿವಣ್ಣ ಅವರು ಉದ್ಘಾಟಿಸಲಿದ್ದಾರೆ. 10.30 ಗಂಟೆಗೆ ಶಾಸಕರು ರಾಷ್ಟ್ರಧ್ವಜ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ನಾಡ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಡಾ.ಮಂತರ್ ಗೌಡ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕಿ ಹಾಗೂ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್, ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಹಾಗೂ ಕರ್ನಾಟಕ ಮಾನವ ಹಕ್ಕುಗಳ ಆಯೋಗದ ರಾಜ್ಯಾಧ್ಯಕ್ಷ ಅವರೆಮಾದಂಡ ಶರಣ್ ಪೂಣಚ್ಚ ಪಾಲ್ಗೊಳ್ಳಲಿದ್ದಾರೆ. ಅತಿಥಿಗಳಾಗಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಹೆಚ್.ವಿ.ಚಂದ್ರಶೇಖರ್, ಕಸಾಪ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಕಡ್ಲೆರ ತುಳಸಿ ಮೋಹನ್, ಕೊಡಗು ಸಹಕಾರ ಭಾರತಿ ಜಿಲ್ಲಾಧ್ಯಕ್ಷ ವಾಂಚೀರ ಅಜಯ್, ಮಡಿಕೇರಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಪಿ.ಮಹೇಶ್ ಹಾಗೂ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಟಿ.ಅನಿಲ್ ಭಾಗವಹಿಸಲಿದ್ದಾರೆ. ಕ.ಸಾ.ಪ ಮೂರ್ನಾಡು ಹೋಬಳಿ ಘಟಕದ ಸ್ಥಾಪಕಾಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ, ಕಾಂತೂರು-ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಟಿ.ಎಸ್.ಕುಶನ್ ರೈ, ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ, ಮೂರ್ನಾಡು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ, ಹೊದ್ದೂರು ಗ್ರಾ.ಪಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲ ಎ.ಎ., ಪಿ.ಎಂ.ಶ್ರೀ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಪುಷ್ಪಾವತಿ ಬಿ.ಎಸ್, ಮೂರ್ನಾಡು ಎಂ.ಇ.ಎಸ್. ಪ್ರೌಢಶಾಲೆಯ ಕನ್ನಡ ಶಿಕ್ಷಕ ಪ್ರಶಾಂತ್ ಎಸ್.ಡಿ, ಮೂರ್ನಾಡು ಕಸಾಪ ಗೌರವ ಕಾರ್ಯದರ್ಶಿ ಕಟ್ಟೆಮನೆ ಮಹಾಲಕ್ಷ್ಮಿ, ಕೋಶಾಧಿಕಾರಿ ಮಡೆಯಂಡ ಸೂರಜ್ ಕುಮಾರ್, ಸಂಘಟನಾ ಕಾರ್ಯದರ್ಶಿ ಮಮತ ಕೊಂಪುಳಿರ, ಪ್ರತಿನಿಧಿ ಕೆ.ಎಂ.ಖಾದರ್, ಸಹ ಕಾರ್ಯದರ್ಶಿ ಅಪ್ಪಚಂಡ ಸರಸ್ವತಿ ಕಾವೇರಪ್ಪ ಹಾಗೂ ಮಹಿಳಾ ಪ್ರತಿನಿಧಿ ಮೀನಾಕ್ಷಿ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕಿ ಹಾಗೂ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಸನ್ಮಾನಿಸಲಾಗುವುದು ಮತ್ತು ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಾಗುವುದು. ಅಲ್ಲದೆ ಸಾಹಿತಿಗಳು, ಸಾಧಕ ವಿದ್ಯಾರ್ಥಿಗಳು ಮತ್ತು ಸಮಾಜ ಸೇವಕರನ್ನು ಕೂಡ ಸನ್ಮಾನಿಸಿ, ಗೌರವಿಸಲಾಗುವುದು. ಮಧ್ಯಾಹ್ನ 2 ಗಂಟೆಗೆ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ವಿದುಷಿ ಜಲಜಾ ನಾಗರಾಜ್ ವಹಿಸಲಿದ್ದಾರೆ. ಅತಿಥಿಗಳಾಗಿ ಕ.ಸಾ.ಪ ಮೂರ್ನಾಡು ಹೋಬಳಿ ಘಟಕದ ಸ್ಥಾಪಕಾಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ, ಕರ್ನಾಟಕ ರಾಜ್ಯ ಕೃಷಿ ಪ್ರಶಸ್ತಿ ವಿಜೇತ ಹಾಗೂ ಗ್ರಾ.ಪಂ ಮಾಜಿ ಸದಸ್ಯ ಮಠದಮನೆ ಧನಂಜಯ ಪಾಲ್ಗೊಳ್ಳಲಿದ್ದಾರೆ. ವಿವಿಧ ಸಂಘ ಸಂಸ್ಥೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ನೃತ್ಯ, ಕೊಡಗು ಪೊಲೀಸ್ ಸಾಂಸ್ಕøತಿಕ ವೇದಿಕೆಯಿಂದ ಹಾಡುಗಾರಿಕೆ, ಕೊಡಗು ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನಡೆಯಲಿದೆ. ಸರ್ವರಿಗೂ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಈರಮಂಡ ಹರಿಣಿ ವಿಜಯ್ ಹಾಗೂ ಕಸಾಪ ಪದಾಧಿಕಾರಿಗಳು ಮಾಹಿತಿ ನೀಡಿದ್ದಾರೆ.











