ಮಡಿಕೇರಿ ನ.3 NEWS DESK : ಕೂಡಿಗೆ ಗ್ರಾಮ ಪಂಚಾಯತಿಯ ಮಾಸಿಕ ಸಭೆಯ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಟಿ.ಗಿರೀಶ್ ಕುಮಾರ್ ನವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪ್ರಮುಖವಾಗಿ ಶುಚಿತ್ವಕ್ಕೆ ಹೆಚ್ಚಿನ ಅಧ್ಯತೆ ನೀಡುವುದರ ಜೊತೆಯಲ್ಲಿ ಎಲ್ಲಾ ವಾರ್ಡ್ ಗಳಿಗೆ ಸಮರ್ಪಕವಾಗಿ ಕುಡಿಯುವ ನೀರಿನ ಸರಬರಾಜು ಮಾಡುವ ಮೂಲಕ ನೀರಿನ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಹಾಜರಿದ್ದ ಸದಸ್ಯರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಕ್ರಿಯಾ ಯೋಜನೆಯ ಅನುಗುಣವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಬಗ್ಗೆ ಚರ್ಚೆಗಳು ನಡೆದವು. ಪ್ರಮುಖವಾಗಿ ಈಗಾಗಲೇ ಕೂಡಿಗೆಯಿಂದ ಹೆಬ್ಬಾಲೆರವರೆಗೆ ನಿಗದಿತ ಅಪಘಾತ ವಲಯದ ಹಾಸನ ಹೆದ್ದಾರಿ ರಸ್ತೆಯ ಕಾಮಗಾರಿಯು ನಡೆಯುತ್ತಿದ್ದು, ರಸ್ತೆಯ ಅಗಲಿಕರಣದ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯವರು ರಸ್ತೆಗೆ ಹೊಂದಿಕೊಂಡಂತೆ ಇರುವ ಮರ ಮತ್ತು ಮನೆಯ ಚಾವಣಿಗಳನ್ನು ಇಲಾಖೆಯ ನಿಯಮಾನುಸಾರ ತೆರವುಗೊಳಸಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸುವಂತೆ ಸಂಬಂಧಿಸಿದವರಿಗೆ ಪತ್ರ ವ್ಯವಹಾರ ಮಾಡಲು ಸಭೆಯಲ್ಲಿ ಸೂಚನೆ ನೀಡಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿ ಅಧ್ಯಕ್ಷ ಕೆ.ಟಿ.ಗರೀಶ್, ಸಭೆಯಲ್ಲಿ ಚರ್ಚೆಗೊಂಡ ವಿಷಯಗಳ ಬಗ್ಗೆ ಸಮಗ್ರವಾದ ವ್ಯವಸ್ಥೆವನ್ನು ಕೈಗೊಳ್ಳುವ ಮೂಲಕ ಗ್ರಾಮ ಪಂಚಾಯತಿ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದರು. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದರು. ಅಭಿವೃದ್ಧಿ ಅಧಿಕಾರಿ ಮಂಜಳಾ ಸಭೆಗೆ ಸರಕಾರದ ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಉಪಾಧ್ಯಕ್ಷೆ ಜಯಶ್ರೀ, ಸದಸ್ಯರಾದ ಟಿ. ಪಿ. ಹಮೀದ್, ಮಂಗಳ, ಮೋಹಿನಿ, ಅರುಣ್ ರಾವ್, ಅನಂತ, ಹೆಚ್.ಎಸ್. ರವಿ, ಪಲ್ಲವಿ, ಲಕ್ಷಿ, ಚಂದ್ರು, ಜಯಶೀಲಾ. ಸೇರಿದಂತೆ ಕಾರ್ಯದರ್ಶಿ ಪುನೀತ್ ಹಾಜರಿದ್ದರು. ಪುನೀತ್ ಸ್ವಾಗತಿಸಿ, ವಂದಿಸಿದರು.











