ಮಡಿಕೇರಿ ನ.3 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್, ಸೋಮವಾರಪೇಟೆ, ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕುಶಾಲನಗರದ ಮೂಕಾಂಬಿಕಾ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಹೆಚ್ಚುವರಿ ಬೋಧನಾ ತರಬೇತಿ (ಟ್ಯೂಷನ್ ಕ್ಲಾಸ್) ಕಾರ್ಯಕ್ರಮ ನಡೆಯಿತು. ಮೂಕಾಂಬಿಕಾ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಮುಳ್ಳುಸೋಗೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಶಿವನಾಂದ ಉದ್ಘಾಟಿಸಿ, ಮಾತನಾಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭಾವಂತ ಮತ್ತು ಅಧ್ಯಯನಶೀಲರಾಗಿ ಹಾಗೂ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಉತ್ತಮ ಅಂಕಗಳನ್ನು ಪಡೆಯಲು ಇಂತಹ ತರಗತಿಗಳ ಮೂಲಕ ಕಲಿಯುವ ವಿಷಯ ಚೇತರಿಕೆ, ಮತ್ತು ಚೈತನ್ಯದ ಬೆಳವಣಿಗೆ ಸಹಕಾರಿಯಾಗುವುದು ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಕೂಡಿಗೆ ಪದವಿ ಪೂರ್ವ ಕಾಲೇಜು ಮಾಜಿ ಉಪಾಧ್ಯಕ್ಷ ಕೆ.ಕೆ.ನಾಗರಾಜಶೆಟ್ಟಿ ಮಾತಾನಾಡಿ, ಇಂದಿನ ಪೈಪೋಟಿಯ ಯುಗದಲ್ಲಿ ವಿದ್ಯಾರ್ಥಿಗಳು ಹೆಚ್ಚು ಅಧ್ಯಾಯ ಶೀಲರಾಗಬೇಕು. ವಿದ್ಯಾರ್ಥಿಗಳು ಪ್ರಸಕ್ತ ವಿದ್ಯಮಾನದ ಜೊತೆಯಲ್ಲಿ ಪಠ್ಯ ಪುಸ್ತಕದ ವಿಷಯಗಳನ್ನು ಹೆಚ್ಚು ಅರಿತುಕೊಂಡು ಮುಂದಿನ ದಿನಗಳಲ್ಲಿ ಬರುವ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದುವ ಮೂಲಕ ಮುಂದಿನ ಉನ್ನತ ಶಿಕ್ಷಣಕ್ಕೆ ಸಾಗಲು ಪ್ರೌಢಶಾಲಾ ಶಿಕ್ಷಣ ಹಂತ ಪ್ರಮುಖ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸುರೇಶ್ ವಹಿಸಿದರು. ಕಾರ್ಯಕ್ರಮ ಪ್ರಾಸ್ತಾವಿಕ ನುಡಿಗಳನ್ನು ಕುಶಾಲನಗರ ಧರ್ಮಸ್ಥಳ ಗ್ರಾಮಾಭಿವೃದ್ದ ಯೋಜನೆಯ ಮೇಲ್ವಿಚಾರಕರಾದ ಕೆ.ಟಿ ನಾಗರಾಜ್ ಅಡಿದರು. ವೇದಿಕೆಯಲ್ಲಿ ಶಾಲಾ ಶಿಕ್ಷಕರ ವೃಂದ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಹಾಜರಿದ್ದರು.











