ಮಡಿಕೇರಿ ನ.4 NEWS DESK : ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಕೇರಿ ಗ್ರಾಮದ ಪರಕಾಡು ರಸ್ತೆ ಉದ್ಘಾಟನೆಗೊಂಡಿತು. ಕಳೆದ 20-25 ವರ್ಷಗಳಿಂದ ಅಭಿವೃದ್ಧಿ ಕಾಣದೆ ನೆನೆಗುಡಿಗೆ ಬಿದ್ದಿತ್ತು. ಸ್ಥಳೀಯರ ಬೇಡಿಕೆ ಮೇರೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅನುದಾನದ 5 ಲಕ್ಷಗಳಲ್ಲಿ ಪೂರ್ಣಗೊಂಡಿದ್ದು, ಜನರಿಗೆ ಅನುಕೂಲವಾಗಿದೆ. ಈ ಸಂದರ್ಭ ಪಂಚಾಯಿತಿ ಅಧ್ಯಕ್ಷರಾದ ವನಜಾಕ್ಷಿ, ಪಂಚಾಯಿತಿ ಸದಸ್ಯರುಗಳಾದ ಹೇಮಾವತಿ, ಆಮಿನ ಮೈದು, ಊರಿನ ಪ್ರಮುಖರಾದ ರಮ್ಮಿ ನಾಣಯ್ಯ, ಸುರೇಶ್, ಅಶ್ರಫ್, ಹ್ಯಾರೀಶ್ ಹಾಜಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು. ರಸ್ತೆ ಕಾಮಗಾರಿಗೆ ಸಹಕರಿಸಿದ ಶಾಸಕರಿಗೆ ಹಾಗೂ ಬ್ಲಾಕ್ ಅಧ್ಯಕ್ಷರಾದ ಇಸ್ಮಾಯಿಲ್ ಅವರಿಗೆ ಗ್ರಾಮಸ್ಥರು ಧನ್ಯವಾದ ಸಲ್ಲಿಸಿದ್ದಾರೆ.











