ಮಡಿಕೇರಿ ನ.5 NEWS DESK : ಬೆಂಗಳೂರಿನ ವಿಧಾನಸೌಧ ಕಚೇರಿಯಲ್ಲಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಸಮಾವೇಶ ನಡೆಸುವ ಕುರಿತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರೊಂದಿಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಜಿಲ್ಲಾ ಒ ಬಿ ಸಿ ಘಟಕದ ಅಧ್ಯಕ್ಷ ಬಾನಂಡ ಪ್ರತ್ಯು, ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಕೇಚಮಾಡ ಸಿದ್ದು ನಾಚಪ್ಪ ಉಪಸ್ಥಿತರಿದ್ದರು.











