Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ ಬಗ್ಗೆ ಅರಿವು ಮೂಡಿಸುವುದು ಪ್ರತಿಯೊಬ್ಬರ ಜವಾಬ್ದಾರಿ : ಎಂಎಲ್‍ಸಿ ಸುಜಾ ಕುಶಾಲಪ್ಪ*
ಇತ್ತೀಚಿನ ಸುದ್ದಿಗಳು

*ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ ಬಗ್ಗೆ ಅರಿವು ಮೂಡಿಸುವುದು ಪ್ರತಿಯೊಬ್ಬರ ಜವಾಬ್ದಾರಿ : ಎಂಎಲ್‍ಸಿ ಸುಜಾ ಕುಶಾಲಪ್ಪ*

November 5, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ನ.5 NEWS DESK : ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಮಂಡೇಪಂಡ ಸುಜಾ ಕುಶಾಲಪ್ಪ ಹೇಳಿದರು. ವಿರಾಜಪೇಟೆಯ ಕರ್ನಾಟಕ ಸಂಘದ ವತಿಯಿಂದ ಮಹಿಳಾ ಸಮಾಜ ಸಭಾಂಗಣದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಸೋಮವಾರ ನಡೆದ ರಾಜ್ಯೋತ್ಸವ ಆಚರಣೆ ಹಾಗೂ ವಿವಿಧ ತಾಲೂಕು ಮಟ್ಟದ ಸ್ವರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಮಂಡೇಪಂಡ ಸುಜಾ ಕುಶಾಲಪ್ಪ ಅವರು, ನಾವು ಕನ್ನಡ ಬಳಕೆ ಮಾಡುವ ಮೂಲಕ ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ವಿಸ್ತರಿಸಬೇಕು. ಕನ್ನಡ ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಸದಾ ಕಟಿಬದ್ಧರಾಗಿರುತ್ತೇವೆ ಎಂದು ನಿಶ್ಚಯಿಸಬೇಕು ಎಂದರಲ್ಲದೆ ಗಡಿ ಭಾಗವಾದ ವಿರಾಜಪೇಟೆ ವ್ಯಾಪ್ತಿಯಲ್ಲಿ ಕನ್ನಡ ನಾಡು ನುಡಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕನ್ನಡದ ನಾಮಫಲಕ ಕಡ್ಡಾಯವಾಗಿ ಎಲ್ಲ ಅಂಗಡಿಗಳಲ್ಲಿ ಅಳವಡಿಸಲು ಕ್ರಮ ತೆಗೆದುಕೊಳ್ಳಬೇಕು ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ಸಂಘದ ಅಧ್ಯಕ್ಷ ಮಾಳೇಟಿರ ಬೋಪಯ್ಯ ಮಾತನಾಡಿ, ಜ್ಞಾನ ಸಂಪಾದನೆಗೆ ಎಲ್ಲಾ ಭಾಷೆಗಳು ಅಗತ್ಯ. ಇಂಗ್ಲಿಷ್ ಮತ್ತು ಇತರ ಭಾಷೆಗಳನ್ನು ಕಲಿಯೋಣ, ವ್ಯವಹಾರಕ್ಕಾಗಿ ಬಳಸೋಣ. ಆದರೆ ನಮ್ಮ ಮಾತೃಭಾಷೆ ಕನ್ನಡವನ್ನು ಪ್ರೀತಿಯಿಂದ ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಹೆಮ್ಮೆಯಿಂದ ಹಸ್ತಾಂತರಿಸಬೇಕು. ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಏಕೈಕ ಭಾಷೆ ಕನ್ನಡ. 2008ರಲ್ಲಿ ಶಾಸ್ತ್ರೀಯ ಭಾಷೆಯ ಸ್ಥಾನಮಾನ ಪಡೆದ ಕನ್ನಡ ನಮ್ಮೆಲ್ಲರ ಹೆಮ್ಮೆ. ಭಾಷೆ ನಿರಂತರವಾಗಿ ಬಳಕೆಯಲ್ಲಿದ್ದಾಗ ಮಾತ್ರ ಅದರ ಸೌಂದರ್ಯ ಮತ್ತು ಅಭಿಮಾನ ಜೀವಂತವಾಗಿರುತ್ತದೆ ಎಂದು ಅವರು ಹೇಳಿದರಲ್ಲದೆ ಕನ್ನಡವನ್ನು ಸಮೃದ್ಧಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ನಮ್ಮ ಭಾಷೆ, ನಮ್ಮ ಹೆಮ್ಮೆ ಅದನ್ನು ಉಳಿಸಿ ಬೆಳೆಸುವುದರೊಂದಿಗೆ ನಮ್ಮ ಮನೆಯಲ್ಲಿ ಮಾತನಾಡುವ ಬಾಷೆ ಯಾವುದೇ ಆಗಿದ್ದರೂ ವ್ಯವಹಾರಿಕವಾಗಿ ಕನ್ನಡ ಬಳಸಬೇಕು. ಎಲ್ಲ ಕಡೆ ಕನ್ನಡದ ನಾಮಫಲಕ ಕಡ್ಡಾಯವಾಗಿ ಹಾಕುವಂತಾಗಬೇಕು ಎಂದರು. ಇದೇ ಸಂದರ್ಭ ಕ್ರೀಡಾ ಕ್ಷೇತ್ರದಲ್ಲಿ ಚೆಪ್ಪುಡಿರ ಎಸ್ ಪೂಣಚ್ಚ, ಸೇನಾ ಕ್ಷೇತ್ರದಲ್ಲಿ ಚೇಂದ್ರಿಮಾಡ ನಂಜಪ್ಪ, ಶಿಕ್ಷಣ ಕ್ಷೇತ್ರದಲ್ಲಿ ದೇವಣಗೇರಿ ಬಿ.ಸಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಹೆಚ್.ಡಿ ಲೋಕೇಶ್ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಈರಮಂಡ ಹರಿಣಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಸನ್ಮಾನಿತರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ನಿರ್ದೇಶಕರಾದ ಚಿಲ್ಲವಂಡ ಕಾವೇರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮೂಕಚಂಡ ಡಿ ಕಾವೇರಮ್ಮ, ಚೇಂದ್ರಮಾಡ ಪವೀನ್ ನಾಚಪ್ಪ ಸ್ಫರ್ದೆಗಳ ತೀರ್ಪುಗಾರಿಕೆ ನೀಡಿದರು. ಕುಸುಮ ಸೋಮಣ್ಣ, ಬಲ್ಲಡಿಚಂಡ ವಿಜು, ತಾತಂಡ ಪ್ರಭಾ ನಾಣಯ್ಯ ಸಾಧಕರುಗಳನ್ನು ಪರಿಚಯಿಸಿದರು. ವೇದಿಕೆಯಲ್ಲಿ ಕರ್ನಾಟಕ ಸಂಘದ ಉಪಾಧ್ಯಕ್ಷ ಚೇನಂಡ.ಈ.ಗಿರೀಶ್ ಪೂಣಚ್ಚ, ಕಾರ್ಯದರ್ಶಿ ಮುಂಡ್ಯೋಳಂಡ.ಕುಸುಮ ಸೋಮಣ್ಣ, ಕೋಶಾಧಿಕಾರಿ ಕೋಟೆರ.ಯು.ಗಣೇಶ್ ತಮ್ಮಯ್ಯ, ನಿರ್ಧೇಶಕರಾದ ಸಿ.ಪಿ. ಕಾವೇರಪ್ಪ, ಚೇನಂಡ.ಎಂ.ಸುರೇಶ್ ನಾಣಯ್ಯ, ಪುಗ್ಗೇರ ನಂದ, ಮುಂಡಂಡ.ರಾಣು ಮಂದಣ್ಣ, ಬೊಳ್ಯಪಂಡ ಎಂ.ಸುರೇಶ್, ಬಾಚೀರ.ಗಣೇಶ್ ಬಿದ್ದಪ್ಪ, ಕಂಜಿತಂಡ ಎಂ.ಮೊಣ್ಣಪ್ಪ, ಮೂಕಚಂಡ.ಬಿ. ದೇವಯ್ಯ, ಚಾರಿಮಂಡ ಯು. ಶರಣು ನಂಜಪ್ಪ, ಬಲ್ಲಡಿಚಂಡ ಜಿ. ವಿಜು ಕುಶಾಲಪ್ಪ, ಪೋರೇರ ಎಂ. ಬಿದ್ದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು. ನಂತರ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸ್ಫರ್ಧಾ ಕಾರ್ಯಕ್ರಮಗಳು ನಡೆಯಿತು. ವಿದ್ಯಾರ್ಥಿ ಪೂಜಾ ಪ್ರಾರ್ಥಿಸಿ, ತಾತಂಡ ಪ್ರಭಾ ನಾಣಯ್ಯ ನಿರೂಪಿಸಿ, ಕಂಜಿತಂಡ ಎಂ.ಮೊಣ್ಣಪ್ಪ ಸ್ವಾಗತಿಸಿದರೆ, ಬಾಚೀರ ಗಣೇಶ್ ಬಿದ್ದಪ್ಪ ವಂದಿಸಿದರು. ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.

 

 

 

 

 

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಚಾಂಪಿಯನ್ಸ್ ಟ್ರೋಫಿ-2025 ಸೀಸನ್-1 : ಮಡಿಕೆಬೀಡು ಕುಲಾಲ (ಕುಂಬಾರ) ಬಳಗ ಚಾಂಪಿಯನ್ : ಕುಂಬಾರ ರಾಕರ್ಸ್ ತಂಡ ರನ್ನರ್ಸ್*
Next Article *ಬಾಳುಗೋಡುವಿನಲ್ಲಿ ನುಡಿ ಮೃದಂಗ ಸಮಾರಂಭ : ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಇರಲಿ : ಹೆಚ್.ಜಿ.ಸಾವಿತ್ರಿ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.