ಮಡಿಕೇರಿ ನ.5 NEWS DESK : ಮಹಿಷಾಸುರ ಮರ್ದಿನಿ ದೇವಾಲಯದ ಜೀರ್ಣೋದ್ಧಾರಕ್ಕೆ ಅನುದಾನ ಒದಗಿಸುವಂತೆ ದೇವಾಲಯದ ಸಮಿತಿ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಅವರಿಗೆ ಮನವಿ ಸಲ್ಲಿಸಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ದೇವಾಲಯ ಸಮಿತಿ ಪ್ರಮುಖರು ಮಹಿಷಾಸುರ ಮರ್ದಿನಿ ದೇವಸ್ಥಾನ ತಾವೂರು ಭಾಗಮಂಡಲ ಕೊಡಗು ಜಿಲ್ಲೆಯಲ್ಲಿರುವ ದೇವಸ್ಥಾನವು ಅತ್ಯಂತ ಪುರಾತನ ದೇವಸ್ಥಾನ ವಾಗಿದ್ದು, ಇದೀಗ ಶೀತಲಗೊಂಡಿದೆ. ಜೀರ್ಣೋದ್ಧಾರ ಮಾಡಲು ಅಗತ್ಯವಿರುವುದರಿಂದ 50 ಲಕ್ಷ ಅನುದಾನ ಬಿಡುಗಡೆ ಮಾಡಲು ಮನವಿ ಸಲ್ಲಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು ಅನುದಾನ ಬಿಡುಗಡೆ ಮಾಡುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು. ನಿಯೋಗದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರಾದ ಕೋಳಿ ಬೈಲು ಸಿ ವೆಂಕಟೇಶ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕುದುಕುಳಿ ಸಿ.ಅಶ್ವಥ್ ಹಾಗೂ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.











