
ಬೆಂಗಳೂರು ನ.6 NEWS DESK : ಸ್ಯಾಂಡಲ್‌ವುಡ್‌ನಲ್ಲಿ ಪೋಷಕ ನಟ ಹಾಗೂ ಖಳನಟರಾಗಿ ಖ್ಯಾತಿ ಪಡೆದಿದ್ದ ಹರೀಶ್ ರಾಯ್ ಇಂದು (ಗುರುವಾರ) ನಿಧನರಾಗಿದ್ದಾರೆ. ಅವರು ಬಹು ಕಾಲದಿಂದ ಬೆಂಗಳೂರಿನ ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಥೈರಾಯಡ್ ಕ್ಯಾನ್ಸರ್ ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಹೆಂಡತಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ʼಓಂʼ ಸಿನಿಮಾದಲ್ಲಿ ಖಳನಟನಾಗಿ ಮಿಂಚಿದ್ದ ಹರೀಶ್ ರಾಯ್, ಜೋಡಿ ಹಕ್ಕಿ, ಚಕ್ರವರ್ತಿ, ಕಾಶಿ, ಸಂಜು ವೆಡ್ಸ್ ಗೀತ, ನಲ್ಲ,ತಾಯವ್ವ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ತಮಿಳಿನಲ್ಲೂ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಅಂಡರ್ ವರ್ಲ್ಡ್, ಮೀಂದುಮ್ ಒರು ಕಾದಲ್ ಕಧೈ, ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ, ಓಂ ಹಾಗೂ ಸ್ಯಾಂಡಲ್ವುಡ್ನ ಟಾಪ್ ಸಿನಿಮಾ ಕೆಜಿಎಫ್ ಚಾಪ್ಟರ್-1 ಹಾಗೂ ಕೆಜಿಎಫ್ ಚಾಪ್ಟರ್-2 ರಲ್ಲಿ ಅಭಿನಯಿಸಿದ್ದಾರೆ.










