ಮಡಿಕೇರಿ ನ.6 NEWS DESK : ಪೊನ್ನಂಪೇಟೆಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಪೌರಕಾರ್ಮಿಕರ ವಿಶೇಷ ಕುಂದು ಕೊರತೆಗೆ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಪೌರಕಾರ್ಮಿಕರ ಅಹವಾಲುಗಳನ್ನು ಆಲಿಸಿದರು. ಹಿಂದೆ ಪೌರ ಕಾರ್ಮಿಕರನ್ನು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಭೇಟಿ ಮಾಡಿಸಿದ ಶಾಸಕರು, ಮುಖ್ಯಮಂತ್ರಿಗಳಿಗೆ ಇವರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿಯನ್ನು ಸಲ್ಲಿಸಿದ್ದನ್ನು ನೆನಪಿಸಿದ ಪೌರಕಾರ್ಮಿಕರು ತಮ್ಮ ಸೇವಾ ಭದ್ರತೆಗೆ ಬೇಕಾದ ಸವಲತ್ತುಗಳನ್ನು ಕಲ್ಪಿಸುವಂತೆ ಶಾಸಕರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪುಡೀರ ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಉಪ ವಿಭಾಗಧಿಕಾರಿ ನಿತಿನ್ ಚಿಕ್ಕಿ, ಪೊನ್ನಂಪೇಟೆ ತಾಲೂಕು ಬಗರ್ ಹುಕುಂ ಅಧ್ಯಕ್ಷರಾದ ಅಣ್ಣಳಮಾಡ ಲಾಲಾ ಅಪ್ಪಣ್ಣ, ಪಂಚಾಯಿತಿ ಅಧ್ಯಕ್ಷರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಪೊನಂಪೇಟೆ, ಗೋಣಿಕೊಪ್ಪ ಹಾಗೂ ವಿರಾಜಪೇಟೆಯ ಪೌರಕಾರ್ಮಿಕರು ಭಾಗವಹಿಸಿದರು.











