ಮಡಿಕೇರಿ ನ.7 NEWS DESK : ಪೊನ್ನಂಪೇಟೆಯ ನೂತನ ತಾಲ್ಲೂಕು ಕಚೇರಿ ಕಟ್ಟಡ ನಿರ್ಮಾಣಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಇತ್ತೀಚಿಗಷ್ಟೇ ನೂತನ ತಾಲೂಕು ಎಂದು ರಾಜ್ಯ ಸರ್ಕಾರ ಘೋಷಿಸಿದ ಬಳಿಕ, ಪೊನ್ನಂಪೇಟೆ ತಾಲೂಕಿನ ವಿವಿಧ ಆಡಳಿತ ಕಟ್ಟಡಗಳ ನಿರ್ಮಾಣ/ಮೇಲ್ದರ್ಜೆ ಕಾಮಗಾರಿಗಳಿಗೆ ಶಾಸಕರು ಸರಕಾರದಿಂದ 8 ಕೋಟಿ 60 ಲಕ್ಷ ಅನುದಾನ ಒದಗಿಸುತ್ತಿದ್ದಾರೆ. ಅದರಂತೆ ಕಂದಾಯ ಸಚಿವರೊಂದಿಗೆ ತಾಲೂಕು ಕಚೇರಿ ಕಟ್ಟಡಕ್ಕೆ ಶಿಲನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಿದರು. ಈ ಸಂದರ್ಭ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ತಾಲೂಕು ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಪ್ರಶಾಂತ್ ಕಾಳಿಮಾಡ, ತಾಲೂಕು ಬಗರ್ ಹುಕುಂ ಅಧ್ಯಕ್ಷ ಅಣ್ಣಳಮಾಡ ಲಾಲಾ ಅಪ್ಪಣ್ಣ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣೀರ ಹರೀಶ್, ಉಪಾಧ್ಯಕ್ಷ ಅಲಿರ ರಶೀದ್, ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಸರಕಾರಿ ನಾಮನಿರ್ದೇಶಿತ ಅಧ್ಯಕ್ಷರುಗಳು, ಆಹ್ವಾನಿತ ಗಣ್ಯರು, ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಜಿಲ್ಲಾ ಹಾಗೂ ಬ್ಲಾಕ್ ಮಟ್ಟದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.











