ಮಡಿಕೇರಿ ನ.7 NEWS DESK : ಪೊನ್ನಂಪೇಟೆ ತಾಲ್ಲೂಕಿನಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕರು ನೀರಾವರಿ ನಿಗಮ ಅನುದಾನದಲ್ಲಿ ಕ್ಷೇತ್ರಾದ್ಯಂತ ಕೈಗೊಳ್ಳಬೇಕಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿಯನ್ನು ಪಡೆದರು. ಈ ಸಂದರ್ಭ ತಾಲೂಕು ಬಗರ್ ಹುಕುಂ ಅಧ್ಯಕ್ಷರು ಅಣ್ಣಳಮಾಡ ಲಾಲಾ ಅಪ್ಪಣ್ಣ, ಪಟ್ಟಣ ಪಂಚಾಯಿತಿ ಅಧ್ಯಕ್ಷರು ಅಣ್ಣೀರ ಹರೀಶ್ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.











