


ಮಡಿಕೇರಿ ನ.8 NEWS DESK : ಅರಪಟ್ಟು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಕಡಂಗ ಪ್ರಾಥಮಿಕ ಶಾಲೆಯ ಬಳಿ ಅಂಗನವಾಡಿ ಕಟ್ಟಕ್ಕೆ ರೂ.20ಲಕ್ಷದಲ್ಲಿ ನಿರ್ಮಾಣವಾಗಲಿದ್ದು, ಭೂಮಿ ಪೂಜೆ ಬಳಿಕ ಮಾತನಾಡಿದ ಶಾಸಕರು, ಪ್ರತಿ ವಿದ್ಯಾರ್ಥಿಯು ತಮ್ಮ ವಿದ್ಯಾಭ್ಯಾಸದ ಆರಂಭವನ್ನು ಅಂಗನವಾಡಿಯಲ್ಲಿ ಪ್ರಾರಂಭಿಸುತ್ತಾರೆ. ಹಾಗಾಗಿ ಅಂಗನವಾಡಿ ಕೇಂದ್ರಗಳು ದೇಶದ ಭವಿಷ್ಯ ನಿರ್ಮಾಣದಲ್ಲಿ ಮಹತ್ವದ ಪಾತ್ರವನ್ನು ಒದಗಿಸುತ್ತದೆ. ರಾಜ್ಯ ಸರ್ಕಾರ ಈಗಾಗಲೇ ಅಂಗನವಾಡಿಯಲ್ಲಿ ಕಲಿಯುವ ಮಕ್ಕಳಿಗೆ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದೆ. ಸುಸಜ್ಜಿತ ಕಟ್ಟಡ ಹಾಗೂ ಪುಟಾಣಿ ಮಕ್ಕಳ ಕಲಿಕೆಗೆ ಬೇಕಾದಂತಹ ಎಲ್ಲಾ ವ್ಯವಸ್ಥೆಗಳು ಈ ಅಂಗನವಾಡಿ ಕೇಂದ್ರಗಳಲ್ಲಿ ಇರಲು ಸರ್ಕಾರ ವ್ಯವಸ್ಥೆ ಕಲ್ಪಿಸಿದೆ. ಕಾಮಗಾರಿಯು ಶೀಘ್ರದಲ್ಲಿ ಮುಕ್ತಾಯಗೊಂಡು ಮಕ್ಕಳ ಓದಿಗೆ ಸಹಕಾರಿಯಾಗಲಿದೆ ಎಂದು ಶಾಸಕರು ಶುಭ ಹಾರೈಸಿದರು. ಈ ಸಂದರ್ಭ ಕೆಡಿಪಿ ಸದಸ್ಯರು ಮಾಳೆಟೀರ ಪ್ರಶಾಂತ್, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ನರಿಯಂದಡ ಗ್ರಾಮ ಅಧ್ಯಕ್ಷರು ಕೌಶಿಕ್ ಕಾವೇರಮ್ಮ, ಉಪಾಧ್ಯಕ್ಷರು ಹಾಗೂ ವಲಯ ಅಧ್ಯಕ್ಷರಾದ ಕೋಡಿರ ವಿನೋದ್ ನಾಣಯ್ಯ, ಶೈಲಾ ಕುಟ್ಟಪ್ಪ, ವಾಣಿ, ಪ್ರಕಾಶ್, ಸುಬೀರ್, ಮಮ್ಮಾದ್, ಕುಂಡಚ್ಚಿರ ಮಂಜು ದೇವಯ್ಯ, ಹಾಗೂ ಪಕ್ಷದ ಪ್ರಮುಖರು, ಸ್ಥಳೀಯರು ಉಪಸ್ಥಿತರಿದ್ದರು.









