
ಮಡಿಕೇರಿ ನ.9 NEWS DESK : ವಿರಾಜಪೇಟೆ ತಾಲೂಕಿನ ಕಡಂಗ ಭಾಗಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ಲೋಕೋಪಯೋಗಿ ಇಲಾಖೆಯ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಕಡಂಗ-ಚೆಯ್ಯಂಡಾಣೆ ಸಂಪರ್ಕಿಸುವ ಈ ಮುಖ್ಯ ರಸ್ತೆ, ಮಳೆಯಿಂದ ಹಾನಿಗೀಡಾಗಿದ್ದು ಶಾಸಕರ ವಿಶೇಷ ಅನುದಾನದಲ್ಲಿ ರೂ.4 ಕೋಟಿ 75 ಲಕ್ಷದ ಈ ರಸ್ತೆಯ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಶೀಘ್ರದಲ್ಲೇ ಕಾಮಗಾರಿಯು ಪೂರ್ಣಗೊಳ್ಳಲಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯರು ಮಾಳೆಟೀರ ಪ್ರಶಾಂತ್, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ನರಿಯಂದಡ ಗ್ರಾಮ ಅಧ್ಯಕ್ಷರು ಕೌಶಿಕ್ ಕಾವೇರಮ್ಮ, ಉಪಾಧ್ಯಕ್ಷರು ಹಾಗೂ ವಲಯ ಅಧ್ಯಕ್ಷರಾದ ಕೋಡಿರ ವಿನೋದ್ ನಾಣಯ್ಯ, ಶೈಲಾ ಕುಟ್ಟಪ್ಪ, ವಾಣಿ, ಪ್ರಕಾಶ್, ಸುಬೀರ್, ಮಮ್ಮಾದ್, ಕುಂಡಚ್ಚಿರ ಮಂಜು ದೇವಯ್ಯ, ಹಾಗೂ ಪಕ್ಷದ ಪ್ರಮುಖರು, ಸ್ಥಳೀಯರು ಉಪಸ್ಥಿತರಿದ್ದರು.









