Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ನಗರಸಭೆಯಿಂದ ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿದೆ : ಬಿಜೆಪಿ ಸ್ಪಷ್ಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ನಗರಸಭೆಯಿಂದ ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿದೆ : ಬಿಜೆಪಿ ಸ್ಪಷ್ಟನೆ*

ನವೆಂಬರ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.8 NEWS DESK : ಮಡಿಕೇರಿ ನಗರಸಭೆಯ ಸ್ವಂತ ನಿಧಿ 3.35 ಕೋಟಿ ರೂ. ವೆಚ್ಚದ ರಸ್ತೆಯನ್ನು ಒಳಗೊಂಡಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಕಾರ್ಯಗಳು ನಡೆಸಿ, ಗುತ್ತಿಗೆದಾರರಿಗೆ ಕಾರ್ಯಾದೇಶವನ್ನು ನೀಡಲಾಗಿದೆ. ಶೀಘ್ರದಲ್ಲೆ ಕಾಮಗಾರಿಗಳು ನಡೆಯಲಿದೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಡಿಕೇರಿ ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭಾ ಆಡಳಿತ ಮಂಡಳಿ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿರುವ ನಗರಸಭಾ ಸದಸ್ಯ ರಾಜೇಶ್ ಯಲ್ಲಪ್ಪ ಅವರು, ನಗರದಲ್ಲಿ ನಡೆದಿರುವ ನಡೆಯಲಿರುವ ಕಾಮಗಾರಿಗಳ ಬಗ್ಗೆ ಚರ್ಚೆಗೆ ಬರಲಿ ಎಂದು ಸವಾಲೊಡ್ಡಿದರು. 2025-26ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ನಗರಸಭೆಯಿಂದ 138.70 ಲಕ್ಷಗಳ ಅಭಿವೃದ್ಧಿ ಕಾರ್ಯ, ಎಸ್‍ಎಫ್‍ಸಿ ಯೋಜನೆಯಡಿ 9.32 ಲಕ್ಷ ವೆಚ್ಚದ ಕುಡಿಯುವ ನೀರಿನ ಕಾಮಗಾರಿ, ಎಸ್‍ಎಫ್‍ಸಿ ಯೋಜನೆಯಡಿ 9.77 ಲಕ್ಷ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿ, ನಗರದ ಎಲ್ಲಾ ವಾರ್ಡ್‍ಗಳಲ್ಲಿ 166.50 ಲಕ್ಷ ರೂ. ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ನಗರಸಭೆಯ ಹದಿನಾರು ಬಿಜೆಪಿ ಸದಸ್ಯರ ವಿರುದ್ಧ ಮಾತನಾಡುವ ಯಾವುದೇ ನೈತಿಕತೆ ರಾಜೇಶ್ ಯಲ್ಲಪ್ಪ ಅವರಿಗಿಲ್ಲ. ರಾಜಾಸೀಟಿನ ಪರಿಸರಕ್ಕೆ ಧಕ್ಕೆ ತರುವ ಗ್ಲಾಸ್ ಬ್ರ್ರಿಡ್ಜ್ ನಿರ್ಮಾಣ ಪ್ರಯತ್ನ ಇವರಿಂದ ನಡೆದ ಸಂದರ್ಭ, ಅವರದೇ ಪಕ್ಷದ ಹಿರಿಯ ನಾಯಕ ಎಂ.ಸಿ.ನಾಣಯ್ಯ ಅವರೆ ಛೀಮಾರಿ ಹಾಕಿದ್ದಾರೆ ಎಂದು ಹೇಳಿದರು. ದಸರಾ ಉತ್ಸವದ ಸಂದರ್ಭ ನಗರಸಭೆಯ ಸ್ವಂತ ನಿಧಿಯ 10 ಲಕ್ಷ ರೂ.ಗಳಿಂದ ರಸ್ತೆ ಗುಂಡಿ ಮುಚ್ಚುವ ಕಾರ್ಯ ನಡೆಸುವ ಸಂದರ್ಭವೆ, ಕೇಂದ್ರದ ಎನ್‍ಡಿಆರ್‍ಎಫ್ ನಿಧಿಯ 38 ಲಕ್ಷ ರೂ.ಗಳ ಕಾಮಗಾರಿ ನಡೆಸುವ ಪ್ರಯತ್ನವನ್ನು ರಾಜೇಶ್ ಯಲ್ಲಪ್ಪ ಮಾಡಿದ್ದರು. ಆ ಸಂದರ್ಭ ಬಿಜೆಪಿ ಅದಕ್ಕೆ ತಕ್ಕ ಉತ್ತರ ನೀಡಿ ಕಾಮಗಾರಿ ನಿಲ್ಲಿಸಿತ್ತು. ಇದೀಗ ಒಟ್ಟು ನಗರಸಭೆ ನಿಧಿ ಮತ್ತು ಎನ್‍ಡಿಆರ್‍ಎಫ್ ಅನುದಾನ ಸೇರಿದಂತೆ ಒಟ್ಟು 48 ಲಕ್ಷ ರೂ. ವೆಚ್ಚದಲ್ಲಿ ನಗರದ ರಸ್ತೆ ಕೆಲಸಗಳು ಇನ್ನು ಕೆಲವೇ ದಿನದಲ್ಲಿ ನಡೆಯಲಿದೆಯೆಂದು ಸ್ಪಷ್ಟಪಡಿಸಿದರು.
ನಗರಸಭೆಯ ಸಾಮಾನ್ಯ ಸಭೆಯಲ್ಲಿ ರಾಜೇಶ್ ಯಲ್ಲಪ್ಪ ಅವರು ತಮ್ಮ ವೈಯಕ್ತಿಕ ಅಜೆಂಡಾಗಳನ್ನಷ್ಟೆ ಇರಿಸಿಕೊಂಡು, ಮೈಸೂರು ರಸ್ತೆಯ ಮಳಿಗೆಗಳ ಬಗ್ಗೆ ಗೊಂದಲ ಎಬ್ಬಿಸಿ ನಾಮನಿರ್ದೇಶಿತ ಸದಸ್ಯರೊಂದಿಗೆ ಸಭೆಯಿಂದ ಹೊರ ನಡೆದಿದ್ದಾರೆ. ವೈಯಕ್ತಿಕ ವಿಚಾರ ಬಿಟ್ಟು ನಗರದ ಅಭಿವೃದ್ಧಿ ಬಗ್ಗೆ ಕಾಳಜಿ ವಹಿಸದಿರುವುವ ಧೋರಣೆ ಇವರ ಜನಪರ ಕಾಳಜಿಯನ್ನು ತೋರಿಸುತ್ತದೆ ಎಂದು ವ್ಯಂಗ್ಯವಾಡಿದರು. ಮಡಿಕೇರಿ ಕ್ಷೇತ್ರದ ಶಾಸಕರ ಅನುದಾನದ ಸಿಂಹಪಾಲನ್ನು ರಾಜೇಶ್ ಯಲ್ಲಪ್ಪ ಅವರು, ಶಾಸಕರ ಹಾದಿ ತಪ್ಪಿಸುವ ಮೂಲಕ ತಮ್ಮ ವಾರ್ಡ್‍ಗೆ ಬಳಸಿಕೊಂಡಿರುವುದಾಗಿ ಮಹೇಶ್ ಜೈನಿ ಆರೋಪಿಸಿದರು. ಬಿಜೆಪಿ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ ಅವರು ಮಾತನಾಡಿ, ಮೈಸೂರು ರಸ್ತೆಯ ಬಳಿಯಲ್ಲಿರುವ ಮಳಿಗೆಗಳನ್ನು ಎಲ್ಲಾ ಅಗತ್ಯ ಪರವಾನಗಿಗಳನ್ನು ಪಡೆದು ನಡೆಸಲಾಗುತ್ತಿದೆ. ಹೀಗಿದ್ದೂ ರಾಜೇಶ್ ಯಲ್ಲಪ್ಪ ಅವರು ತಮ್ಮ ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಅದಕ್ಕೆ ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ. ಅವರು ಬಿಜೆಪಿಯ ನಗರಸಭಾ ಆಡಳಿತ ಮಂಡಳಿ ನಡೆಸುತ್ತಿರುವ ಅಭಿವೃದ್ಧಿ ಕಾರ್ಯಗಳಿಂದ ಹತಾಶರಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದಾಗಿ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅನಿತಾ ಪೂವಯ್ಯ ಹಾಗೂ ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ.ಅರುಣ್ ಕುಮಾರ್ ಅವರು ಮಾತನಾಡಿ, ನಗರಸಭೆಯ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಅಡ್ಡಗಾಲು ಹಾಕುವುದನ್ನು ಖಂಡಿಸುತ್ತೇವೆ. ನಗರಸಭೆಯ ಬಿಜೆಪಿ ಆಡಳಿತಕ್ಕೆ ಪಕ್ಷ ಬೆಂಬಲವಾಗಿ ನಿಲ್ಲಲಿದೆಯೆಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ನಗರ ಬಿಜೆಪಿ ಉಪಾಧ್ಯಕ್ಷ ಬಿ.ಪಿ.ಡಿಶು ಹಾಗೂ ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.