ಮಡಿಕೇರಿ NEWS DESK ನ.9 : ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ ಹಾಗೂ ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ವತಿಯಿಂದ ನ.15 ರಂದು ಕೋಲಾರ, ಕಾಸರಗೋಡು ಗಡಿನಾಡು ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕನ್ನಡ ಭವನದ ಕೊಡಗು ಜಿಲ್ಲಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷೆ ರುಬೀನಾ ಎಂ.ಎ ಅವರಿಗೆ ‘ಕಾಸರಗೋಡು ಕನ್ನಡ ಭವನ ರಜತ ಮಹೋತ್ಸವ ಸಂಭ್ರಮ ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2025’ ನೀಡಿ ಗೌರವಿಸಲಾಗುವುದು ಎಂದು ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕಾಧ್ಯಕ್ಷ ಡಾ.ವಾಮನ್ ರಾವ್ ಬೇಕಲ್ ಅವರು ತಿಳಿಸಿದ್ದಾರೆ. ನ.15ರಂದು ಕಾಸಗೋಡಿನ ನುಳ್ಳಿಪ್ಪಾಡಿಯ ಕನ್ನಡ ಭವನ ವೇದಿಕೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.










