ಮಡಿಕೇರಿ ನ.11 NEWS DESK : ಕೊಡಗಿನಲ್ಲಿ ದಶಕಗಳಿಂದ ಪರಿಹಾರ ಕಾಣದೆ ಕಾಡುತ್ತಿರುವ ಪಟ್ಟೇದಾರ ಸಮಸ್ಯೆಯ ಕುರಿತು ಕಳೆದ ವಿಧಾನಸಭಾ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಕೋರಿಕೆ ಮೇರೆಗೆ ರಚಿತವಾದ, ಕರ್ನಾಟಕ ವಿಧಾನಸಭೆ ಪರಿಶೀಲನ ಸಮಿತಿಯ 2ನೇ ಮಹತ್ವದ ಸಭೆ ವಿಧಾನಸೌಧದಲ್ಲಿ ನಡೆಯಿತು. ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಹಲವು ಮಹತ್ವದ ನಿರ್ಣಯಗಳನ್ನು ಇಂದಿನ ಸಭೆಯಲ್ಲಿ ಚರ್ಚಿಸಿ ಕೈಗೊಳ್ಳಲಾಯಿತು.











