ಮಡಿಕೇರಿ ನ.11 NEWS DESK : ಚಿಕ್ಕಬಳ್ಳಾಪುರದಲ್ಲಿ ನಡೆದ 17ರ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಶಾಲಾ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ನಡೆದ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸುಂಟಿಕೊಪ್ಪದ ಸಂತ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರ್.ಜೀವಿಕ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ರೆವೆರೆಂಟ ಫಾದರ್ ವಿಜಯಕುಮಾರ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಸೆಲ್ವಾ ರಾಜ್ ಆರ್ ಅಭಿನಂದನೆ ಸಲ್ಲಿಸಿದ್ದಾರೆ. ಆರ್.ಜೀವಿಕ ಸುಂಟಿಕೊಪ್ಪದ ನಿವಾಸಿ ಸೈನಿಕ ರಾಜಕುಮಾರ ಹಾಗೂ ಲಕ್ಷ್ಮಿ ದಂಪತಿಯ ಪುತ್ರಿ. ಜೀವಿಕ ಕರಾಟೆ ತರಬೇತುದಾರರಾದ ಮುಖೇಶ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾಳೆ.











