Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕುಶಾಲನಗರ ನೂತನ ತಾಲ್ಲೂಕು ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ*
ಇತ್ತೀಚಿನ ಸುದ್ದಿಗಳು

*ಕುಶಾಲನಗರ ನೂತನ ತಾಲ್ಲೂಕು ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ*

November 11, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ನ.11 NEWS DESK : ಕುಶಾಲನಗರದ ಪಾಲಿಟೆಕ್ನಿಕ್ ಕಾಲೇಜು ಬಳಿ 8.60 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುವ ‘ಪ್ರಜಾಸೌಧ’ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಸಚಿವರು ರಾಜ್ಯಾದ್ಯಾದಂತ ದರಖಾಸ್ ಪೋಡಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸರ್ಕಾರದಿಂದ ಮಂಜೂರಾದ ಜಮೀನನ್ನು ಅನುಬಂಧ-1 ರಡಿ ಸರ್ವೆ ಮಾಡಲಾಗುತ್ತಿದೆ. ಮನೆ ಮನೆಗೆ ತೆರಳಿ ಮಾಹಿತಿ ಪಡೆದು ಸರಿಪಡಿಸುವ ಕಾರ್ಯ ನಡೆಯುತ್ತಿದೆ ಎಂದು ಸಚಿವರು ಹೇಳಿದರು. ಕೊಡಗು ಜಿಲ್ಲೆಯಲ್ಲಿ 2344 ದರಖಾಸ್ ಪೋಡಿ ಅಭಿಯಾನಡಿ ಪ್ರಕರಣಗಳನ್ನು ತೆಗೆದುಕೊಳ್ಳಲಾಗಿದ್ದು, ಇದರಲ್ಲಿ 1500ಕ್ಕೂ ಹೆಚ್ಚು ಕಡತ ವಿಲೇವಾರಿ ಮಾಡಲಾಗಿದೆ ಎಂದು ಸಚಿವರು ಹೇಳಿದರು. ರಾಜ್ಯದಲ್ಲಿ 42 ಲಕ್ಷ ಜಮೀನು ಮೃತರ ಹೆಸರಿನಲ್ಲಿದ್ದು, ಇದನ್ನು ಸಹ ಪಟ್ಟಿ ಮಾಡಲಾಗಿದೆ. ಈ ಪೌತಿ ಖಾತೆ ಆಂದೋಲನಡಿ ರೈತರ ಮನೆ ಬಾಗಿಲಿಗೆ ಹೋಗಿÀ್ಕುಟುಂಬದವರ ಹೆಸರಿಗೆ ಖಾತೆ ಮಾಡುವ ಕಾರ್ಯ ಕೈಗೊಳ್ಳಲಾಗಿದೆ ಎಂದರು. ಭೂ ಸುರಕ್ಷತೆ ಯೋಜನೆಯಡಿ ಕಡತಗಳು ಕಾಣೆಯಾಗದಂತೆ ಕ್ರಮವಹಿಸಲಾಗಿದೆ. ಮೂಲ ಕಡತಗಳನ್ನು ಸ್ಕ್ಯಾನಿಂಗ್ ಮಾಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು. ಭೂಮಿಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ ಕಡತ ಕಾಣೆಯಾಗುವುದನ್ನು ತಪ್ಪಿಸಲು ಕ್ರಮವಹಿಸಲಾಗಿದೆ ಎಂದು ಸಚಿವರು ಹೇಳಿದರು. ರಾಜ್ಯದಲ್ಲಿ ಭೂಮಿಗೆ ಸಂಬಂಧಪಟ್ಟಂತೆ 50 ಕೋಟಿ ಪುಟಗಳನ್ನು ಸ್ಕ್ಯಾನಿಂಗ್ ಮಾಡಲಾಗಿದೆ. ಇನ್ನೂ 50 ಕೋಟಿ ಪುಟ ಸ್ಕ್ಯಾನಿಂಗ್ ಮಾಡಲು ಬಾಕಿ ಇದೆ. ಎಲ್ಲಾ ದಾಖಲೆಗಳು ಆನ್‍ಲೈನ್ ಮೂಲಕ ಮೊಬೈಲ್‍ನಲ್ಲಿಯೇ ದೊರೆಯಲಿದೆ ಎಂದರು. ರಾಜ್ಯದಲ್ಲಿರುವ ಗ್ರಾಮ ಲೆಕ್ಕಿಗರು ಹಾಗೂ ಕಂದಾಯ ನಿರೀಕ್ಷಕರಿಗೆ ಲ್ಯಾಪ್‍ಟಾಪ್ ವಿತರಿಸುವ ಕಾರ್ಯ ನಡೆದಿದ್ದು, ಕಾಗದ ರಹಿತವಾಗಿ ಇ-ಕಚೇರಿ ಮೂಲಕ ಸೌಲಭ್ಯಗಳನ್ನು ಒದಗಿಸಲು ಮುಂದಾಗಲಾಗಿದೆ ಎಂದು ಸಚಿವರು ಹೇಳಿದರು. ಇಲಾಖೆಯಲ್ಲಿ ಸಾರ್ವಜನಿಕರನ್ನು ಶತಾಯಿಸಬಾರದು. ಉತ್ತರಾಧಾಯಿತ್ವ ಹೊಂದಿರಬೇಕು. ಆ ನಿಟ್ಟಿನಲ್ಲಿ ಕಂದಾಯ ಇಲಾಖೆಯನ್ನು ಅಪ್‍ಡೇಟ್ ಮಾಡಲಾಗುತ್ತಿದೆ ಎಂದರು. ತಹಶೀಲ್ದಾರರು ಮತ್ತು ಉಪ ವಿಭಾಗಾಧಿಕಾರಿ ಕೋರ್ಟ್‍ಗಳಲ್ಲಿ ವರ್ಷಾನುಗಟ್ಟಲೆ ಕಡತ ಬಾಕಿ ಇರುವುದನ್ನು ಗಮನಿಸಿ ಕಡತ ವಿಲೇವಾರಿಗೆ ಚುರುಕುಗೊಳಿಸಲಾಗಿದೆ ಎಂದರು. ತಹಶೀಲ್ದಾರರ ನ್ಯಾಯಾಲಯದಲ್ಲಿ ಇದ್ದ 10,774 ಪ್ರಕರಣಗಳಲ್ಲಿ 510 ಪ್ರಕರಣಗಳು ಮಾತ್ರ ಬಾಕಿ ಇದೆ ಎಂದು ಸಚಿವರು ತಿಳಿಸಿದರು. ಹಾಗೆಯೇ ಉಪ ವಿಭಾಗಾಧಿಕಾರಿ ಕೋರ್ಟ್‍ನಲ್ಲಿ ನ್ಯಾಯಾಲಯದಲ್ಲಿ 6 ತಿಂಗಳಿಂದ ಕಡತಗಳನ್ನು ವಿಲೇವಾರಿ ಮಾಡಬೇಕಿದ್ದು, ಹಿಂದ 59,335 ಅರ್ಜಿಗಳು ವಿಲೇವಾರಿಗೆ ಬಾಕಿ ಇತ್ತು. ಈಗ 12,249 ಅರ್ಜಿಗಳು ಮಾತ್ರ ವಿಲೇವಾರಿಗೆ ಬಾಕಿ ಇದೆ ಎಂದು ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು. ಕಳೆದ 5 ವರ್ಷದಲ್ಲಿ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ 32,787 ಪ್ರಕರಣಗಳು ಇದ್ದವು, ಈಗ 3,974 ಅರ್ಜಿಗಳು ಮಾತ್ರ ಬಾಕಿ ಇದೆ. ಮೂರು ತಿಂಗಳಲ್ಲಿ ವಿಲೇವಾರಿ ಮಾಡಬೇಕಿದೆ ಎಂದು ಸಚಿವರು ಹೇಳಿದರು. ಭೂಕುಸಿತ ತಡೆಯುವ ಸಂಬಂಧ ಕಾಮಕಾರಿ ಕೈಗೊಳ್ಳಲು 50 ಕೋಟಿ ರೂ. ಬಿಡುಗಡೆಯಾಗಿದ್ದು, ಇನ್ನೂ 10 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದರು. ಜಿಲ್ಲೆಯ 5 ತಾಲ್ಲೂಕಿಗೆ ತಹಶೀಲ್ದಾರ್ ನೇಮಕ ಮಾಡಲಾಗಿದೆ. ಗ್ರಾಮ ಆಡಳಿತ, ಸರ್ವೇ ಅವರನ್ನು ನೇಮಿಸಲಾಗಿದೆ. ಕೊಡಗು ಜಿಲ್ಲೆಗೆ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ ಎಂದರು. ಪ್ರಜಾಸೌಧ ತಾಲ್ಲೂಕು ಆಡಳಿತ ಭವನದಲ್ಲಿ ತಹಶೀಲ್ದಾರ್ ಕಚೇರಿ, ಭೂ ದಾಖಲೆಗಳ ಕಚೇರಿ, ಉಪ ನೋಂದಾಣಾಧಿಕಾರಿ ಕಚೇರಿ, ಖಜಾನೆ, ಹೀಗೆ ಹಲವು ಇಲಾಖೆಗಳು ಇರಲಿವೆ ಎಂದು ಹೇಳಿದರು. ಕೊಡಗು ಜಿಲ್ಲೆಯ ಇಬ್ಬರು ಶಾಸಕದ್ವಯರು ಕ್ರೀಯಾಶೀಲವಾಗಿ ಜಿಲ್ಲೆಗೆ ಆಗಬೇಕಿರುವ ಕೆಲಸ ಸಂಬಂಧ ಗಮನ ಸೆಳೆದು ಕೆಲಸ ಮಾಡಿಸುತ್ತಾರೆ ಎಂದು ಕೃಷ್ಣಬೈರೇಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ತಾಲ್ಲೂಕು ಆಡಳಿತ ಭವನ ಪ್ರಜಾಸೌಧ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ಹಾಗೆಯೇ ಕೆಎಸ್‍ಆರ್‍ಟಿಸಿ ಡಿಪೋ ಕಾಮಗಾರಿ ಪ್ರಗತಿಯಲ್ಲಿದೆ ಎಂದರು. ಕುಶಾಲನಗರದಲ್ಲಿ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ 46 ಕೋಟಿ ರೂ. ಬಿಡುಗಡೆಯಾಗಿದ್ದು, ಕಾಮಗಾರಿಗೆ ಚಾಲನೆ ನೀಡಬೇಕಿದೆ ಎಂದು ತಿಳಿಸಿದರು. ಪ್ರಜಾಸೌಧ ಆಡಳಿತ ಭವನ ನಿರ್ಮಾಣಕ್ಕೆ ಉನ್ನತ ಶಿಕ್ಷಣ ಸಚಿವರಾದ ಸುಧಾಕರ ಅವರು ಉಚಿತವಾಗಿ ಭೂಮಿ ನೀಡಿರುವುದಕ್ಕೆ ಇದೇ ಸಂದರ್ಭದಲ್ಲಿ ಶಾಸಕರು ಕೃತಜ್ಞತೆ ಸಲ್ಲಿಸಿದರು. ಅಧಿಕಾರಿಗಳು ಸಾರ್ವಜನಿಕರ ಸೇವೆಯನ್ನು ಬದ್ಧತೆಯಿಂದ ಮಾಡಬೇಕು. ಕಂದಾಯ ಇಲಾಖೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಪರಿಹರಿಸಬೇಕು ಎಂದು ಸಲಹೆ ಮಾಡಿದರು. ಸಿ ಮತ್ತು ಡಿ ಭೂಮಿ ಪರಿಹಾರ, ಭೂಮಿ ದುರಸ್ತಿ ಕಾರ್ಯ, ಪೋಡಿ ಮುಕ್ತ ಅಭಿಯಾನ ಪ್ರಗತಿ, ಭೂಮಿ ಸಂಬಂಧ ಡಿಜಿಟಲೈಜೇಸನ್, ತಹಶೀಲ್ದಾರ್ ಮತ್ತು ವಿಎ ಹಂತದಲ್ಲಿ ಬೇಗ ಕೆಲಸಗಳು ಆಗಬೇಕು ಎಂದು ಹೇಳಿದರು. ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಇರಬಾರದು. ಸಾರ್ವಜನಿಕರಿಗೆ ಸ್ಪಂದಿಸಬೇಕು. ಪ್ರಜಾಸೌಧ ಆಡಳಿತ ಭವನ ಕಾಮಗಾರಿಯನ್ನು ಒಂದು ವರ್ಷದಲ್ಲಿ ಪೂರ್ಣಗೊಳಿಸುವಂತೆ ಗೃಹ ಮಂಡಳಿಗೆ ಸೂಚಿಸಿದರು. ಕುಶಾಲನಗರ ತಾ.ಪಂ.ಕಟ್ಟಡ ನಿರ್ಮಾಣಕ್ಕೂ ತಯಾರು ಮಾಡಿಕೊಳ್ಳುವಂತೆ ಇದೇ ಸಂದರ್ಭದಲ್ಲಿ ಶಾಸಕರು ಸಲಹೆ ನೀಡಿದರು.ವಕೀಲರ ಸಂಘದ ಅಧ್ಯಕ್ಷರಾದ ನಾಗೇಂದ್ರ ಬಾಬು ಅವರು ಮಾತನಾಡಿ ಕುಶಾಲನಗರದಲ್ಲಿ ಉಪ ವಿಭಾಗ ಕಚೇರಿ ತೆರೆಯಬೇಕು. ತಾಲ್ಲೂಕು ಕ್ರೀಡಾಂಗಣ ನಿರ್ಮಾಣ ಆಗಬೇಕು. ಉಪ ನೋಂದಾಣಾಧಿಕಾರಿ ಕಚೇರಿ ಆರಂಭಿಸಬೇಕು ಎಂದು ಅವರು ಸಲಹೆ ಮಾಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷರಾದ ವಿ.ಪಿ.ಶಶಿಧರ ಅವರು ಮಾತನಾಡಿ ಕಳೆದ ಎರಡು ದಶಕಗಳ ಹೋರಾಟದ ಪ್ರಯತ್ನದ ಫಲವಾಗಿ ಕುಶಾಲನಗರ ತಾಲ್ಲೂಕು ಕೇಂದ್ರವಾಗಿದ್ದು, ಪ್ರಜಾ ಸೌಧ ನಿರ್ಮಾಣವಾಗುತ್ತಿದೆ ಎಂದು ಅವರು ಹೇಳಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ., ಜಿ.ಪಂ. ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ, ಭೂದಾಖಲೆಗಳ ಉಪ ನಿರ್ದೇಶಕರಾದ ನಿರಂಜನ ಇತರರು ಇದ್ದರು. ಉ.ರಾ.ನಾಗೇಶ್ ನಿರೂಪಿಸಿದರು. ರವಿ ಪ್ರಾರ್ಥಿಸಿದರು.

 

 

Share. Facebook Twitter Pinterest LinkedIn Tumblr Email WhatsApp
Previous Article*ಕರಾಟೆಯಲ್ಲಿ ಸಂತ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರ್.ಜೀವಿಕ ಸಾಧನೆ*
Next Article *ನ.12 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.