ಮಡಿಕೇರಿ ನ.11 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ವನ್ಯಜೀವಿ ಘಟಕಗಳ ದಿನಗೂಲಿನ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರ ನಿಯೋಗ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಅವರ ಪ್ರಮುಖ ಬೇಡಿಕೆಗಳಾದ ಹತ್ತು ವರ್ಷಗಳಿಂದ ಸೇವೆ ಸಲ್ಲಿಸಿದ ದಿನಗೂಲಿ ನೌಕರರನ್ನು ಖಾಯಂಗೊಳಿಸುವುದು, ದಿನಗೂಲಿ ನೌಕರರಾಗಿ ಕೆಲಸ ನಿರ್ವಹಿಸುತ್ತಿದ್ದ ನೌಕರರನ್ನು ಹೊರಗುತ್ತಿಗೆ ಮಾರ್ಪಡಿಸಿರುವುದು. ಆರ್ಥಿಕ ಇಲಾಖೆಯ ಹೊರಡಿಸಿರುವ ಸುತ್ತೋಲೆಯನ್ನು ಮಾರ್ಪಡಿಸುವುದು. ದಿನಗೂಲಿ ಸೇವಾ ಅವಧಿ, ಸೇವಾ ಸೇವಾ ಹಿರಿತನ ವನ್ಯಜೀವಿ ಘಟಕಗಳಲ್ಲಿ ಈ ಪಿಎಫ್, ಇ ಎಸ್ ಐ ಸಮರ್ಪಕವಾಗಿ ನಿರ್ವಹಣೆ, ವಿಮಾಸೌಲಭ್ಯ ಸೇರಿದಂತೆ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರ ಸಂಘವು ಮನವಿ ಸಲ್ಲಿಸಿದರು. ಇದೆ ಸಂದರ್ಭ ಕೊಡಗಿನ ಜಮ್ಮಮಾಲೆ ಸಮಸ್ಯೆಯ ಶೀಘ್ರ ಇತ್ಯರ್ಥಪಡಿಸುವ ಬಗ್ಗೆ ಚರ್ಚಿಸಲಾಯಿತು. ಮನವಿ ಸ್ವೀಕರಿಸಿದ ಸಚಿವರು ತಮ್ಮ ಬೇಡಿಕೆಗಳನ್ನು ಪರಿಗಣಿಸುವ ಬಗ್ಗೆ ಕ್ರಮ ವಹಿಸಲಾಗುವುದೆಂದು ತಿಳಿಸಿದರು. ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಘಟಕಗಳ ದಿನಗೂಲಿ ಹೊರಗುತ್ತಿಗೆ ನೌಕರರ ಸಂಘ ಹಾಗೂ ಪ್ರಾದೇಶಿಕ ಸಂಶೋಧನೆ ಸಾಮಾಜಿಕ ಕರ್ನಾಟಕ ಅರಣ್ಯ ಅಭಿವೃದ್ಧಿ ಒಳಗೊಂಡಂತೆ ಗೌರವ ಅಧ್ಯಕ್ಷ ಎ.ಎಂ.ನಾಗರಾಜ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.











