ಮಡಿಕೇರಿ NEWS DESK ನ.11 : ಮಡಿಕೇರಿ ಕ್ಷೇತ್ರದ ಜನಪ್ರಿಯ ಶಾಸಕ ಡಾ.ಮಂತರ್ ಗೌಡ ಅವರ ಹುಟ್ಟುಹಬ್ಬದ ಅಂಗವಾಗಿ ನ.14 ರಂದು ಗಾಳಿಬೀಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಶೇಷ ಸೇವಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಡಿಕೇರಿ ತಾಲ್ಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಹರಿಪ್ರಸಾದ್ ಕೋಚನ ಅವರು ತಿಳಿಸಿದ್ದಾರೆ. ಶುಕ್ರವಾರ ಮಡಿಕೇರಿ-ಗಾಳಿಬೀಡು ರಸ್ತೆ ಅಭಿವೃದ್ಧಿಯ 3.50 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಗುವುದು. ಅಲ್ಲದೆ ಶಾಸಕರ ಹುಟ್ಟುಹಬ್ಬದ ಹಿನ್ನೆಲೆ ಗಾಳಿಬೀಡು ಪಂಚಾಯತ್ ವ್ಯಾಪ್ತಿಯಲ್ಲಿರುವ ವಿಶೇಷ ಚೇತನ ಕುಟುಂಬಗಳಿಗೆ ತಮ್ಮ ನೇತೃತ್ವದಲ್ಲಿ ಉಚಿತ ರೇಷನ್ ಕಿಟ್‌ಗಳನ್ನು ವಿತರಿಸಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.












