

ನಾಪೋಕ್ಲು ನ.11 NEWS DESK : ಚೆರಿಯಪರಂಬುವಿನ ಆಟದ ಮೈದಾನದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ಕಕ್ಕಬ್ಬೆ ಪ್ರೌಢಶಾಲೆಯ ವಿದ್ಯಾರ್ಥಿನಿ ಪಿ.ಕೆ.ಫಾತಿಮತ್ ಫಜ್ಞ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಪ್ರೌಢಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಕೇಟೊಳಿರ ಕುಟ್ಟಪ್ಪ, ಬಾತ್ಮಿದಾರರಾದ ಸುಧಾ ಗಣಪತಿ, ಮುಖ್ಯ ಶಿಕ್ಷಕ ಅನಿಲ್ ರಾಜ್ ಶ್ಲಾಘನೆ ವ್ಯಕ್ತಪಡಿಸಿದ್ದು, ದೈಹಿಕ ಶಿಕ್ಷಣ ಶಿಕ್ಷಕ ಬೋಪಣ್ಣ ಮಾರ್ಗದರ್ಶನ ನೀಡಿದ್ದರು.
ವರದಿ : ದುಗ್ಗಳ ಸದಾನಂದ.











