ಮಡಿಕೇರಿ ನ.11 NEWS DESK : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ನಾಪೋಕ್ಲು ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ವತಿಯಿಂದ ನಡೆದ 14 ಮತ್ತು 17 ವಯೋಮಿತಿಯ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಪಿ. ಎನ್. ಜೀವ ನಾಣಯ್ಯ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಪಿ.ಸಿ.ಶರಣ್ ಚಂಗಪ್ಪ ತಟ್ಟೆ ಎಸೆತದಲ್ಲಿ ಪ್ರಥಮ ಸ್ಥಾನ, ಆಶಿಕ್ ಮಂದಣ್ಣ ಜಾವೇಲಿನ್ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಶಾಲಾ ಮುಖ್ಯ ಶಿಕ್ಷಕರಾದ ಕುದುಪಜೆ ಕವನ್ ಕುಮಾರ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಸ್ವರೂಪ ಕೆ.ಬಿ., ದೈಹಿಕ ಶಿಕ್ಷಕಿ ಕರವಂಡ ಸೀಮಾ ಗಣಪತಿ ಇದ್ದರು.











