ಕುಶಾಲನಗರ ನ.12 NEWS DESK : ಕ್ರೀಡೆ ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯವನ್ನು ರೂಪಿಸುತ್ತದೆ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು. ಶಾಲಾ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೋಮವಾರಪೇಟೆ ಹಾಗೂ ಫಾತಿಮಾ ವಿದ್ಯಾ ಸಂಸ್ಥೆ ಕುಶಾಲನಗರ ಇವರ ಸಂಯುಕ್ತಾಶ್ರಯದಲ್ಲಿ ಎರಡು ದಿನ ಇಲ್ಲಿನ ಜಂಪ್ ಸ್ಮ್ಯಾಶ್ ಒಳಾಂಗಣದಲ್ಲಿ ಏರ್ಪಡಿಸಿದ್ದ ಮೈಸೂರು ವಿಭಾಗ ಮಟ್ಟದ 14 ಮತ್ತು 17 ವಯೋಮಿತಿಯ
ಬಾಲಕ, ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಯಿಂದ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದು. ಕ್ರೀಡಾ ಸಾಧನೆಗೆ ನಮ್ಮ ಸರ್ಕಾರದ ಉದ್ಯೋಗ ನೇಮಕಾತಿಯಲ್ಲಿ ಶೇ.2 ಅವಕಾಶ ನೀಡಲಾಗಿದೆ.ಈ ಅವಕಾಶವನ್ನು ಕ್ರೀಡಾಪಟುಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕೊಡಗು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯೆಸ್.ಪಲ್ಲೇದ್ ಮಾತನಾಡಿ,ಮೈಸೂರು ವಿಭಾಗದ ಎಲ್ಲಾ ಎಂಟು ಜಿಲ್ಲೆಗಳಿಗೆ ಊಟ,ಉಪಾಹಾರ ಮತ್ತು ವಸತಿ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಮಾಡಲಾಗಿದೆ. ಹಾಗೆ ಜಂಪ್ ಸ್ಮ್ಯಾಶ್ ಅಕಾಡೆಮಿಯ ವ್ಯವಸ್ಥಾಪಕರಾದ ವಕೀಲ ಶರತ್ ಉಚಿತವಾಗಿ ಅಂಕಣದ ವ್ಯವಸ್ಥೆ ಕಲ್ಪಿಸಿದ್ದಾರೆ. ಫಾತಿಮಾ ವಿದ್ಯಾಸಂಸ್ಥೆ ಇಲಾಖೆಯೊಂದಿಗೆ ಸಹಯೋಗ ನೀಡಿ ಪಂದ್ಯಾವಳಿಯ ಯಶಸ್ವಿಗೆ ಶ್ರಮಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ, ಕರ್ನಾಟಕ ರಾಜ್ಯ ನೌಕರ ಸಂಘದ ಸೋಮವಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಪ್ರದೀಪ್ , ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಆರ್. ರತ್ನ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಎಚ್.ಎನ್. ಮಂಜುನಾಥ್,ಕೊಡಗು ಜಿಲ್ಲಾ ಗ್ರೇಡ್ 2 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪೂರ್ಣೇಶ್, ಸೋಮವಾರಪೇಟೆ ತಾಲ್ಲೂಕು ಗ್ರೇಡ್ ಒನ್ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಎನ್.ವಿ.ಸುಜಾತ,ಪ್ರಾಥಮಿಕ ಶಾಲೆಯ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್ ಹಾಗೂ ದೈಹಿಕ ಶಿಕ್ಷಕರು ಮತ್ತಿತರರು ಪಾಲ್ಗೊಂಡಿದ್ದರು. ನಿವೃತ್ತ ಶಿಕ್ಷಕ ಉ.ರಾ.ನಾಗೇಶ್,ಕರುಂಬಯ್ಯ ಸ್ವಾಗತಿಸಿದರು. ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಎಂ.ಎಲ್. ಸುಕುಮಾರಿ ವಂದಿಸಿದರು.ಈ ಕ್ರೀಡಾಕೂಟದಲ್ಲಿ ಮೈಸೂರು ವಿಭಾಗದ ಎಂಟು ಜಿಲ್ಲೆಗಳಾದ ಹಾಸನ ,ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಯ ಕ್ರೀಡಾಪಟುಗಳು ಸೇರಿದಂತೆ ಒಟ್ಟು 32 ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು.











