Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಸಾಕ್ಷ್ಯಚಿತ್ರ ‘ಉಮ್ಮತ್ತಾಟ್’ ಇಂಡಿಯನ್ ಪನೋರಮಾಗೆ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಸಾಕ್ಷ್ಯಚಿತ್ರ ‘ಉಮ್ಮತ್ತಾಟ್’ ಇಂಡಿಯನ್ ಪನೋರಮಾಗೆ ಆಯ್ಕೆ*

ನವೆಂಬರ್ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.12 NEWS DESK : ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ನಿರ್ಮಿಸಿ, ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ನಿರ್ದೇಶಿಸಿರುವ ‘ಉಮ್ಮತ್ತಾಟ್’ ಕೊಡವ ಸಾಕ್ಷ್ಯಚಿತ್ರ ಇಂಡಿಯನ್ ಪನೋರಮಾಗೆ ಆಯ್ಕೆಯಾಗಿದೆ. ಗೋವಾದಲ್ಲಿ ನಡೆಯುವ 56ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನ.27ರಂದು ‘ಉಮ್ಮತ್ತಾಟ್’ ಪ್ರದರ್ಶನಗೊಳ್ಳಲಿದೆ. ‘ಉಮ್ಮತ್ತಾಟ್’ ಕೊಡವ ಜಾನಪದ ನೃತ್ಯ ಪ್ರಕಾರವಾಗಿದ್ದು, ಹಲವು ವರ್ಷಗಳ ಇತಿಹಾಸ ಹೊಂದಿರುವ ಈ ಕಲೆಯ ಮೇಲೆ ಸಾಕ್ಷ್ಯಚಿತ್ರ ಬೆಳಕು ಚೆಲ್ಲಿದೆ. ಒಟ್ಟು 13 ನೃತ್ಯ ಪ್ರಕಾರಗಳನ್ನು ಚಿತ್ರೀಕರಿಸಲಾಗಿದ್ದು, 153 ಕಲಾವಿದರು ನೃತ್ಯ ಮಾಡಿದ್ದಾರೆ. ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ ನಿರ್ದೇಶನದ ಸಾಕ್ಷ್ಯಚಿತ್ರಕ್ಕೆ ‘ಉಮ್ಮತ್ತಾಟ್’ ತರಬೇತುದಾರರಾದ ಕಲಾವಿದೆ ಬೊಳ್ಳಜಿರ ಯಮುನಾ ಅಯ್ಯಪ್ಪ ಅವರ ಸಹ ನಿರ್ದೇಶನವಿದ್ದು, ನಿರೂಪಣೆಯನ್ನು ಕೂಡ ಮಾಡಿದ್ದಾರೆ. ವಸ್ತ್ರ ವಿನ್ಯಾಸ ಮತ್ತು ನೃತ್ಯ ಪ್ರದರ್ಶನಕ್ಕೆ ಸಹಕಾರ ನೀಡಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತೆ, ನೃತ್ಯ ಮತ್ತು ನೃತ್ಯ ಸಂಗೀತ ಭರತನಾಟ್ಯದ ಕುರಿತು ಮಂಡಿಸಿದ ಪ್ರಬಂಧಕ್ಕೆ ಕೇಂದ್ರ ಸರಕಾರದ ಜೂನಿಯರ್ ಫೆಲೋಶಿಪ್ ಪಡೆದಿರುವ ಅಂತರರಾಷ್ಟ್ರೀಯ ಮಟ್ಟದ ಖ್ಯಾತ ಭರತನಾಟ್ಯ ಕಲಾವಿದೆ ಮುಕ್ಕಾಟಿರ ಶಿಲ್ಪ ನಂಜಪ್ಪ ಅವರು ನೃತ್ಯ ಪ್ರಕಾರಗಳನ್ನು ನಿರೂಪಣೆ ಮಾಡಿದ್ದಾರೆ. ಕೊಡಗು ಜಿಲ್ಲೆಯ ಮುಟ್ಲುವಿನಿಂದ ಕುಟ್ಟದವರೆಗಿನ ವಿವಿಧೆಡೆಯ ಸುಂದರ ಪ್ರದೇಶದಲ್ಲಿ ಸಾಕ್ಷ್ಯಚಿತ್ರ ಚಿತ್ರೀಕರಣಗೊಂಡಿದ್ದು, ಸಬ್ ಟೈಟಲ್ ಚೋಕಂಡ ದಿನು ನಂಜಪ್ಪ, ಸಂಗೀತ ಶ್ರೀಸುರೇಶ್, ಛಾಯಾಗ್ರಾಹಣ ವಿನಾಯಕ ರೇವಡಿ ಹಾಗೂ ಟಿ.ಮುತ್ತುರಾಜು ಅವರ ಸಂಕಲನವಿದೆ.  ತಂತಿಪಾಲ, ದೇವಸ್ತೂರು, ಬಲಂಬೇರಿ, ಕಾಕೋಟುಪರಂಬು, ನೀರುಕೊಲ್ಲಿ, ಮುಟ್ಲು, ಬಾಳೆಲೆ ಆದೆಂಗಡ ಐನ್ ಮನೆ, ಗುಹ್ಯ ಅಗಸ್ತೇಶ್ವರ ದೇವಾಲಯ, ಚೇರಂಬಾಣೆಯ ಗೋಪಾಲಕೃಷ್ಣ ದೇವಾಲಯ ಮುಂತಾದೆಡೆ ಚಿತ್ರೀಕರಿಸಲಾಗಿದೆ. ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ದಂಪತಿಗೆ ‘ಉಮ್ಮತ್ತಾಟ್’ ಆಯ್ಕೆ ಮತ್ತೊಂದು ಹೆಗ್ಗಳಿಕೆಯಾಗಿದೆ. *ಮೊದಲ ಸಾಕ್ಷ್ಯಚಿತ್ರ* ‘ಉಮ್ಮತ್ತಾಟ್’ ಕೊಡವ ಸಾಕ್ಷ್ಯಚಿತ್ರ ಇಂಡಿಯನ್ ಪನೋರಮಾಗೆ ಆಯ್ಕೆಯಾದ ಮೊದಲ ಕೊಡವ ಭಾಷಾ ಸಾಕ್ಷ್ಯಚಿತ್ರವಾಗಿದ್ದು, ಇದೊಂದು ದಾಖಲೆಯಾಗಿದೆ ಎಂದು ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.  ಹಿರಿಯ ಸಾಹಿತಿ ಬಾಚರಣಿಯಂಡ ಅಪ್ಪಣ್ಣ, ಜಾನಪದ ಕಲಾವಿದೆ ಪದ್ಮಶ್ರೀ ಐಮುಡಿಯಂಡ ರಾಣಿ ಮಾಚಯ್ಯ, ಜನಪದ ನೃತ್ಯ ಅಧ್ಯಯನ ಗ್ರಂಥ ರಚಿಸಿರುವ ಸಾಹಿತಿ ಡಾ.ರೇವತಿ ಪೂವಯ್ಯ, ಸಾಹಿತಿ ಹಾಗೂ ಕಲಾವಿದೆ ಮೊಣ್ಣಂಡ ಶೋಭಾ ಸುಬ್ಬಯ್ಯ, ತಾಯಿ ಬೇರು ಪುಸ್ತಕದ ರಚನೆಕಾರರಾದ ಬೆಂಗಳೂರಿನ ಸ್ನೇಹ ಕಪ್ಪಣ್ಣ ಅವರುಗಳ ಸಹಕಾರ ಮತ್ತು ಸಲಹೆಯನ್ನು ಪಡೆದು ಸಾಕ್ಷ್ಯಚಿತ್ರ ‘ಉಮ್ಮತ್ತಾಟ್’ ನ್ನು ತಯಾರಿಸಲಾಗಿದೆ. ನ.27 ರಂದು ಮಧ್ಯಾಹ್ನ 2 ಗಂಟೆಗೆ ಗೋವಾದ ಪಂಜಿಮ್ ನ ಇನೋಕ್ಸ್ ಆಡಿ 2 ಹಾಲ್ ನಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಉಮ್ಮತ್ತಾಟ್’ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದ್ದಾರೆ.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.