ಬೆಂಗಳೂರು ನ.11 NEWS DESK : ಬೆಂಗಳೂರಿನ ಗಾಂಧಿನಗರದಲ್ಲಿ ನೂತನ ಕುರುಬ ಸಮಾಜದ ವಿದ್ಯಾರ್ಥಿನಿಲಯ ಕಟ್ಟಡ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಮತ್ತು ತಿಂತಿಣಿ ಮಠದ ಸಿದ್ದರಾಮೇಶ್ವರ ನಂದಾಪುರಿ ಸ್ವಾಮೀಜಿಯವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಬೈರತಿ ಸುರೇಶ್ ಸೇರಿ ಕರ್ನಾಟಕ ರಾಜ್ಯ ಪ್ರದೇಶ ಕುರುಬರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಮಾಜದ ಹಾಲಿ / ಮಾಜಿ ಸಚಿವರುಗಳು, ಶಾಸಕರುಗಳು ಸೇರಿ ಹಲವು ಗಣ್ಯರುಗಳು ಉಪಸ್ಥಿತರಿದ್ದರು.











