Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಲೋಕಾಯುಕ್ತ ಅಧಿಕಾರಿಗಳಿಂದ ದೂರು ಅರ್ಜಿ ಸ್ವೀಕಾರ : ಸರ್ಕಾರಿ ಕೆಲಸ ಲಘುವಾಗಿ ಪರಿಗಣಿಸದೆ ಎಚ್ಚರದಿಂದ ಕರ್ತವ್ಯ ನಿರ್ವಹಿಸಿ : ದಿನಕರ ಶೆಟ್ಟಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಲೋಕಾಯುಕ್ತ ಅಧಿಕಾರಿಗಳಿಂದ ದೂರು ಅರ್ಜಿ ಸ್ವೀಕಾರ : ಸರ್ಕಾರಿ ಕೆಲಸ ಲಘುವಾಗಿ ಪರಿಗಣಿಸದೆ ಎಚ್ಚರದಿಂದ ಕರ್ತವ್ಯ ನಿರ್ವಹಿಸಿ : ದಿನಕರ ಶೆಟ್ಟಿ*

ನವೆಂಬರ್ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.12 NEWS DESK : ಸರಕಾರದ ವಿವಿಧ ಇಲಾಖೆಗಳ ಬಹಳಷ್ಟು ಲೋಪಗಳು ಲೋಕಾಯುಕ್ತರ ಗಮನಕ್ಕೆ ಬರುತ್ತಿದ್ದು, ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿವೆ. ಅಧಿಕಾರಿಗಳು ಸರಕಾರಿ ಕೆಲಸವನ್ನು ಲಘುವಾಗಿ ಪರಿಗಣಿಸಬಾರದು ಮತ್ತು ವಿಳಂಬವಿಲ್ಲದೆ ಜನಪರವಾಗಿ ಕಾರ್ಯನಿರ್ವಹಿಸಬೇಕು ಎಂದು ಮಡಿಕೇರಿ ಲೋಕಾಯುಕ್ತ ಡಿವೈಎಸ್‍ಪಿ ದಿನಕರ ಶೆಟ್ಟಿ ಅವರು ಸೂಚನೆ ನೀಡಿದ್ದಾರೆ. ನಗರದ ತಹಶೀಲ್ದಾರರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಮತ್ತು ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿ ಮಾತನಾಡಿದ ಅವರು ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಧಿಕಾರಿಗಳು ಇರುವುದಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದು, ಈ ಸಂಬಂಧ ಪ್ರತಿನಿತ್ಯ ಚಲನವಲನ ಬಗ್ಗೆ ದಾಖಲು ಮಾಡಬೇಕು ಎಂದು ನಿರ್ದೇಶನ ನೀಡಿದರು. ಸರ್ಕಾರದ ಅಧಿಕಾರಿ ಮತ್ತು ಸಿಬ್ಬಂದಿಗಳಲ್ಲಿ ಸಮಯ ಪಾಲನೆ ಅತೀ ಮುಖ್ಯ. ಆ ನಿಟ್ಟಿನಲ್ಲಿ ಚಲನವಲನ ವಹಿಯನ್ನು ಸರಿಯಾಗಿ ನಿರ್ವಹಿಸಬೇಕು. ರಜೆ ಪಡೆದಿದ್ದಲ್ಲಿ ರಜೆ ಅರ್ಜಿ ಕಚೇರಿಯಲ್ಲಿ ಇರಬೇಕು. ನಗದು ವಹಿ ಬರೆಯಬೇಕು. ಕಚೇರಿ ಕೆಲಸ ನಿರ್ವಹಣೆ ಸಂಬಂಧ ಸರಿಯಾಗಿ ಪಾಲನೆ ಅತೀ ಮುಖ್ಯ ಎಂದು ಸೂಚಿಸಿದರು. ಸರ್ಕಾರಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಹಲವು ದೂರುಗಳು ಕೇಳಿಬರುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು ಎಂದರು. ಶಾಲಾ ಕಾಲೇಜುಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಆಗದಂತೆ ಸದಾ ನಿಗಾವಹಿಸಬೇಕು. ಯಾವುದೇ ಕಾರಣಕ್ಕೂ ಕರ್ತವ್ಯ ಲೋಪ ಮಾಡಬಾರದು. ಸರ್ಕಾರಿ ನೌಕರರು ಉತ್ತರಾದಾಯಿತ್ವ ಹೊಂದಿರಬೇಕು. ಯಾವುದನ್ನು ಲಘುವಾಗಿ ಪರಿಗಣಿಸದೆ ಸಾಕಷ್ಟು ಎಚ್ಚರಿಕೆಯಿಂದ ಗಂಭೀರವಾಗಿ ಸರ್ಕಾರಿ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎಂದು ಲೋಕಾಯುಕ್ತ ಡಿವೈಎಸ್‍ಪಿ ದಿನಕರ ಶೆಟ್ಟಿ ಸೂಚಿಸಿದರು. ವಿದ್ಯಾರ್ಥಿ ನಿಲಯಗಳಲ್ಲಿ ಗುಣಮಟ್ಟದ ಆಹಾರ ನೀಡಬೇಕು. ನಮ್ಮ ಮನೆಯ ಮಕ್ಕಳು ಎಂದು ತಿಳಿಯಬೇಕು. ಇತರರ ಬಗ್ಗೆ ಮಾನವೀಯತೆ ಇರಬೇಕು ಎಂದರು. ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಬೇಕು. ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆ ಮತ್ತು ಬದಲಾವಣೆ ಇರಬೇಕು. ಸರ್ಕಾರದ ವ್ಯವಸ್ಥೆಯಲ್ಲಿ ಪರಿಪೂರ್ಣತೆ ಕಾಯ್ದುಕೊಳ್ಳಬೇಕು ಎಂದು ದಿನಕರ ಶೆಟ್ಟಿ ಹೇಳಿದರು. ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಡೆಯಬೇಕು. ಪ್ರತೀ ಕಚೇರಿಯಲ್ಲಿ ಸ್ವೀಕೃತಿ ಮತು ರವಾನೆ ವಹಿಯನ್ನು ಸಮಪರ್ಕವಾಗಿ ನಿರ್ವಹಿಸಬೇಕು ಎಂದರು. ಲೋಕಾಯುಕ್ತ ಇನ್ಸ್‍ಪೆಕ್ಟರ್ ವೀಣಾ ನಾಯಕ್ ಅವರು ಮಾತನಾಡಿ ಸರ್ಕಾರಿ ಕೆಲಸವನ್ನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಬೇಕು. ವ್ಯಕ್ತಿಯ ವ್ಯಕ್ತಿತ್ವ ಮತ್ತು ಮನುಷ್ಯನ ಮನುಷತ್ವ ಇರಬೇಕು. ಸಾರ್ವಜನಿಕರ ಸೇವೆಗೆ ಬಂದಿರುವವರು ಇರುವ ಅವಕಾಶವನ್ನು ನಿಷ್ಠೆಯಿಂದ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಶತಾಯಿಸಬಾರದು ಎಂದರು. ಸಾರ್ವಜನಿಕರೊಬ್ಬರು ಕಟ್ಟಡ ಮುಕ್ತಾಯ ಪ್ರಮಾಣ ಪತ್ರ ನೀಡುತ್ತಿಲ್ಲ ಎಂದು ದೂರಿದರು. ತಹಶೀಲ್ದಾರ್ ಶ್ರೀಧರ, ತಾ.ಪಂ.ಇಒ ಶೇಖರ್, ಪೌರಾಯುಕ್ತರಾದ ಎಚ್.ಆರ್.ರಮೇಶ್, ಭೂದಾಖಲೆಗಳ ಸಹಾಯಕ ನಿರ್ದೇಶಕರಾದ ಮಹೇಶ್ ಕುಮಾರ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪಣೀಂದ್ರ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷ್ಮಿ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಸ್ನೇಹ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮೋಹನ್ ಕುಮಾರ್, ಕಾರ್ಮಿಕ ಇಲಾಖೆಯ ತಾಲ್ಲೂಕು ಅಧಿಕಾರಿ ಎಂ.ಎಂ.ಯತ್ನಟ್ಟಿ, ಹಿರಿಯ ಉಪ ನೋಂದಣಾಧಿಕಾರಿ ಸೌಮ್ಯಲತ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಿರಿಯ ಭೂ ವಿಜ್ಞಾನಿ ಲೋಯಲ್ ಮಿರಂಡ, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕುಮಾರಸ್ವಾಮಿ, ಯುವ ಸಬಲೀಕಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರವೀಣ್, ಸೆಸ್ಕ್ ಎಇಇ ವಿನಯಕುಮಾರ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.