Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಗ್ರಾಮಸಭೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಗ್ರಾಮಸಭೆ

ನವೆಂಬರ್ 13, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಸುಂಟಿಕೊಪ್ಪ,ನ.13 NEWS DESK : ಬಡಾವಣೆಗಳಿಗೆ ಮೂಲಭೂತ ಸೌಕರ್ಯಗಳು, ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಬೇಕೆಂಬ ಸಲಹೆ, ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಮಾರ್ಪಡುಗೊಳ್ಳಬೇಕು, ಪೈಸಾರಿ ಜಾಗಗಳು ಪಂಚಾಯಿತಿ ಸುರ್ಪದಿಗೆ ಒಳಪಟ್ಟು ಬಡವರಿಗೆ ಸೂರು ಹಂಚಿಕೆಗೊಳ್ಳಬೇಕೆಂದು ಗ್ರಾಮಸಭೆಯಲ್ಲಿ ಗ್ರಾಮಸ್ಥರ ಹಕ್ಕೊತ್ತಾಯ ಕೇಳಿ ಬಂತು. ಸುಂಟಿಕೊಪ್ಪ ಗ್ರೇಡ್  1 ಗ್ರಾಮ ಪಂಚಾಯಿತಿ 2025-26ನೇ ಸಾಲಿನ ಗ್ರಾಮಸಭೆಯ ಅಧ್ಯಕ್ಷತೆಯನ್ನು  ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ವಹಿಸಿದ್ದರು. ಶ್ರೀ ಮಂಜುನಾಥಯ್ಯ ಮಿನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ  ನಡೆಸಲಾದ ಸಭೆಯಲ್ಲಿ  ಕಳೆದ ಬಾರಿ ಗ್ರಾಮಸಭೆಯಲ್ಲಿ ಚರ್ಚಿಸಲಾದ ವಿಚಾರಗಳನ್ನು ಅನುಷ್ಠಾನಗೊಳಿಸಲಾಗಿದೆ. ಇದರ ಮಾಹಿತಿ ಗಂಭೀರ ವಿಚಾರಗಳ ಬಗ್ಗೆ ಕ್ರಮ ಕೈಗೊಳ್ಳದಿರುವ ಬಗ್ಗೆ ಗ್ರಾಮಸ್ಥರಾದ ಸೂಪಿ, ಇಬ್ರಾಹಿಂ, ಕೆ.ಎ.ಲತೀಫ್, ರಜಾಕ್ , ದಿನೇಶ್ , ಉದಯಕುಮಾರ್ ಡೆವಿಡ್  ಜನ್ಸಾನ್, ಮಮತ ಸೇರಿದಂತೆ ಮತ್ತಷ್ಟು ಗ್ರಾಮಸ್ಥರು ವರದಿಯ ಬಗ್ಗೆ ಅಸಾಮಾದಾನ ವ್ಯಕ್ತಪಡಿಸಿದರು.  ಇಬ್ರಾಹಿಂ ಮಾತನಾಡಿ ಪ್ರತಿ ಗ್ರಾಮಸಭೆಯಲ್ಲಿ ನಾವು ಹೇಳುವುದು ನೀವು ಬರೆದುಕೊಳ್ಳುವುದು ಮತ್ತು ಸಭೆಯಲ್ಲಿ ಓದುವುದಕ್ಕೆ  ಮಾತ್ರ ಸೀಮಿತವಾಗಿದೆ ಯಾವ ಯಾವ ಬೇಡಿಕೆಗಳು ಈಡೇರಿಕೆಗೆಯಾಗಿದೆ ಎಂಬುದನ್ನು ಓದಿ ಎಂಬುದನ್ನು ಆಗ್ರಹಿಸಿದರು. ಗದ್ದೆಹಳ್ಳ ನಿವಾಸಿಗಳಾದ ರುಕ್ಸಾನ, ರಜಾಕ್ ಮತ್ತು ಪಟ್ಟೆಮನೆ ಉದಯಕುಮಾರ್ ಮಾತನಾಡಿ, ಸುಂಟಿಕೊಪ್ಪ ಪಟ್ಟಣದ ತ್ಯಾಜ್ಯನೀರು ಮತ್ತು ಮಳೆಗಾಲದಲ್ಲಿ ಪ್ರವಾಹದ ನೀರು ಕೃಷಿ ಮತ್ತು ಮನೆಗಳಿಗೆ ನುಗ್ಗುತ್ತಿದ್ದು, ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕು. ಕೆಲವು ಕಡೆಗಳಲ್ಲಿ ಅಪೂರ್ಣ ಕಾಮಗಾರಿ ನಿರ್ವಹಿಸುವುದರಿಂದ ಸಮಸ್ಯೆ ಹೆಚ್ಚಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಎಸ್ ಐ ದೇವಾಲಯದ ಧರ್ಮಗುರುಗಳಾದ ಮಧುಕಿರಣ್, ವಿಲಿಯಂ ಮತ್ತು ರತ್ನಕುಮಾರ್ ಮಾತನಾಡಿ ಕೊಡವ ಸಮಾಜದ ಸಭಾಂಗಣದಲ್ಲಿ ನಿಯಮ ಮೀರಿ ತಡ ರಾತ್ರಿಯ ವರೆಗೂ ಡಿಜೆ ಮತ್ತು ಧ್ವನಿವರ್ಧಕಗಳನ್ನು ಬಳಕೆ ಮಾಡುತ್ತಿದ್ದು ಜನವಸತಿ ಪ್ರದೇಶವಾಗಿದ್ದು ಚರ್ಚ್ ಮತ್ತು ಮಸೀದಿಗಳಿದ್ದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ರಿದೆ. ಸಂಬಂಧಿಸಿದ ಇಲಾಖೆಗಳಿಗೆ ಸೂಚನೆ ಕೊಟ್ಟು ಈ ಬಗ್ಗೆ ಸೂಕ್ತ ಕ್ರಮಕ್ಕೆ ಸೂಚಿಸಲಾಗುವುದು. ಸಮಗ್ರ ವರದಿ ಬಂದ ಬಳಿಕ ಕಾರ್ಯನಿರ್ವಹಣಾಧಿಕಾರಿಯನ್ಮು ಕರೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದು ಸಭೆಯ ನೊಡಲ್ ಅಧಿಕಾರಿ ಸಿದ್ದೇಗೌಡ ಮಾಹಿತಿ ನೀಡಿದರು. ಪಟ್ಟಣದ ಕಸ ವಿಲೇವಾರಿ ಬಗ್ಗೆ ಸಭೆಯಲ್ಲಿ ತೀವ್ರ ಚರ್ಚೆ ನಡೆದು ಪಂಚಾಯಿತಿ ಯ ಕಸವಿಲೆವಾರಿ ಬಗ್ಗೆ ಅಸಾಮಾದಾನ ವ್ಯಕ್ತವಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಮಾತನಾಡಿ ಸುಂಟಿಕೊಪ್ಪ ದಲ್ಲಿ ಒಣಕಸ ವಿಲೇವಾರಿ ಘಟಕ ಮಾತ್ರ ಇದ್ದು ಹಸಿ ಕಸವನ್ನು ಆಯಾ ಮನೆಯವರೇ ವಿಲೇವಾರಿಗೊಳಿಸಬೇಕೆಂಬ ಮಾರ್ಗಸೂಚಿ ಇದೆ. ಕಸ ವಿಲೇವಾರಿ ಯಲ್ಲಿ ಜನರ ಸಹಕಾರವು ಬೇಕೆಂದು ಮನವಿ ಮಾಡಿದರು. ಗ್ರಾಮಸಭೆಯಲ್ಲಿ ಖಾಸಗಿ ಬಡಾವಣೆಯಲ್ಲಿ ಮನೆಗಳು ಹಾಗೂ ಮಳಿಗೆಗಳು ನಿರ್ಮಾಣಗೊಂಡಿದ್ದು, ಮುಖ್ಯವಾಗಿ ಮನೆಗಳಿಗೆ ನೀರು ಸೌಲಭ್ಯ ಒದಗಿಸಲು ಮೀನಾಮೇಷ, ಪಂಚಾಯಿತಿಯಿಂದ ಮೀನು ಮಾಂಸ ಮಳಿಗೆಗಳು ಖಾಸಗಿ ವ್ಯಕ್ತಿಯ ಜಾಗದಲ್ಲಿ ನಿರ್ಮಿಸಿದ್ದು ಪಂಚಾಯಿತಿ ಯ ಸಾರ್ವಜನಿಕ ರ ಹಣವನ್ನು ಪೋಲು ಮಾಡಲಾಗಿದೆ ಎಂದು ಕೆ.ಎ.ಲತೀಫ್ ಮತ್ತು ದಿನೇಶ್ ದಾಖಲೆ ಸಹಿತ ಆರೋಪ ಮಾಡಿದ್ದರು. ಇದನ್ನು ಪಂಚಾಯಿತಿ ಅಧ್ಯಕ್ಷ, ಸದಸ್ಯರು ಮತ್ತು ಪಿಡಿಓ ಅಲ್ಲಗೆಳೆಯಲು ಮುಂದದಾಗ ದಿನೇಶ್ ತಮ್ಮ ಬಳಿಯಿದ್ದ ನಕ್ಷೆಯನ್ನು ಮತ್ತು ಅಧಿಕೃತ ದಾಖಲೆಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಪಾರ್ವತಮ್ಮ ಬಡಾವಣೆ ಮಮತ ಮಾತನಾಡಿ ನೀರಿನ ಮತ್ತು ಮೂಲಭೂತ ಸೌಲಭ್ಯ ದ ಬಗ್ಗೆ ಖಾಸಗಿ ಲೋಟಸ್ ಬಡಾವಣೆ ಮತ್ತು ಪಾರ್ವತಮ್ಮ ಬಡಾವಣೆ ನಡುವೆ ತಾರತಮ್ಯ ಮತ್ತು ಮಲತಾಯಿ ಧೋರಣೆ ಅನುಸರಿಸುತ್ತಿದ್ದು ಪಂಚಾಯಿತಿ ಆಡಳಿತ ಮಂಡಳಿ ಸರ್ವಸದಸ್ಯರ ನಡುವೆ ಒಗ್ಗಟ್ಟಿನ ಕೊರತೆ ಎದ್ದು ಕಾಣುತ್ತಿದೆ ಹಾಲಿ ಆಡಳಿತ ಮಂಡಳಿಯು ಹಿಂದಿನ ಆಡಳಿತ ಮಂಡಳಿಯ ಬಗ್ಗೆ ಆರೋಪ ಮಾಡುತ್ತಿದ್ದು, ಮುಂದಿನ ಆಡಳಿತ ಮಂಡಳಿ ಹಾಲಿ ಆಡಳಿತ ಮಂಡಳಿಯ ಬಗ್ಗೆ ಆರೋಪ ಮಾಡಿದರೆ ನಿಮ ಉತ್ತರವೇನು ಎಂದು ಪ್ರಶ್ನಿಸಿದರಲ್ಲದೆ ಆಡಳಿತ ಮಂಡಳಿಗಳ ಆರೋಪ ಪ್ರತ್ಯಾರೊಪದ ಬಗ್ಗೆ ಜನಸಾಮಾನ್ಯರು ಹೈರಾಣು ಆಗುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಪಂಚಾಯಿತಿ ಅದ್ಯಕ್ಷ ಪಿ.ಆರ್.ಸುನಿಲ್ ಕುಮಾರ್  ಮಾಲೀಕರಿಗೆ ನೋಟಿಸ್ ನೀಡಲಾಗಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.  ಕೆ.ಎ.ಲತೀಫ್ ಮಾತನಾಡಿ ಪಂಚಾಯಿತಿ ವ್ಯಾಪ್ತಿಯ ಲ್ಲಿ ಸಾಕಷ್ಟು  ಪ್ರಮಾಣದಲ್ಲಿ ಪೈಸಾರಿ ಇವುಗಳಲ್ಲಿ ಕೆಲವು ಅತಿಕ್ರಮಣಕ್ಕೆ ಒಳಗೊಂಡಿದೆ ಅನಧಿಕೃತ ಕಟ್ಟಡಗಳು ನಿರ್ಮಾಣಗೊಂಡಿದೆ. ಇವುಗಳಿಗೆ ಪಂಚಾಯಿತಿ ವತಿಯಿಂದ ಮೂಲಭೂತ ಸೌಲಭ್ಯ ಹೊಂದಿಕೊಳ್ಳಲು ಆದೇಶ ಪ್ರತಿ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿ ಪಿ.ಆರ್.ಸುನಿಲ್ ಕುಮಾರ್ ಗ್ರಾಮ ಪಂಚಾಯಿತಿ ವತಿಯಿಂದ ಕಂದಾಯ ಇಲಾಖೆಗೆ ಮಾಹಿತಿಯನ್ನು ನೀಡಿ ಲತೀಫ್ ಅವರು ನೀಡಿದ ಮಾಹಿತಿ ನೀಡಿದರು. ಈ ಸಭೆಯಲ್ಲಿ ನೋಡಲ್ ಅಧಿಕಾರಿಯಾಗಿ ತೋಟಗಾರಿಕಾ ಇಲಾಖೆಯ  ಉಪನಿರ್ದೇಶಕ ಸಿದ್ದೇಗೌಡ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ  ಶಿವಮ್ಮ ಮಹೇಶ್, ಸದಸ್ಯರುಗಳಾದ ಪ್ರಸಾದ್ ಕುಟ್ಟಪ್ಪ, ಕೆ.ಎಂ.ಆಲಿಕುಟ್ಟಿ, ಶಬ್ಬೀರ್, ಮಂಜುನಾಥ್, ಬಿ.ಎಂ.ಸುರೇಶ್, ಪಿ.ಎಫ್.ಸಬಾಸ್ಟಿನ್, ಸೋಮನಾಥ್, ಶಾಂತಿ, ಗೀತಾ, ಮಂಜುಳ, ನಾಗರತ್ನ, ವಸಂತಿ, ರಫೀಕ್ ಖಾನ್, ಜಿನಾಸುದ್ದೀನ್, ಸೆಲಿನಾ ಜೆಫ್ರಿ  ಪ್ರಾರ್ಥಿಸಿ, ಡಿ.ಎಂ.ಮಂಜುನಾಥ್ ನಿರೂಪಿಸಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಲೆಕ್ಕಾಪರಿಶೋಧಕಿ ಚಂದ್ರಕಲಾ ಮತ್ತು ಗಣಕ ಯಂತ್ರ ಸಿಬ್ಬಂದಿ ಸಂದ್ಯಾ  ಹಿಂದಿನ ಗ್ರಾಮಸಭೆ ಹಾಗೂ ವಾರ್ಡ್ ಸಭೆ ವರದಿ ವಾಚಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.