ಸೋಮವಾರಪೇಟೆ ನ.13 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ 8ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಅಂಗವಾಗಿ ಸೋಮವಾರಪೇಟೆ ಕೊಡವ ಸಮಾಜದಲ್ಲಿ ಪ್ರಕೃತಿ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಲಾಯಿತು. ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಕೇಂದ್ರದ ಡಾ.ಅನನ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರತಿನಿತ್ಯದಲ್ಲಿ ನಮ್ಮ ಜೀವನದಲ್ಲಿ ಸುಲಭವಾಗಿ ಅಳವಡಿಸಿಕೊಳ್ಳಬುಹುದಾದ ಪ್ರಾಣಾಯಾಮ, ಯೋಗಾಸನ, ಸರಳ ಆಹಾರ ಪದ್ಧತಿಗಳ ಮೂಲಕ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಇತ್ತೀಚಿನ ದಿನಗಳಲ್ಲಿ ಯಥೇಚ್ಚವಾಗಿ ಜನರಲ್ಲಿ ಕಾಣಿಸಿಕೊಳ್ಳುವ ಹೃದ್ರೋಗ, ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡದಂತಹ ಕಾಯಿಲೆಗಳನ್ನು ಸುಲಭವಾದ ವ್ಯಾಯಾಮಗಳನ್ನು ಮಾಡುವುದರಿಂದ ಹೇಗೆ ನಿಯಂತ್ರಣ ಮಾಡಿಕೊಳ್ಳಬಹದು ಎಂಬ ಬಗ್ಗೆ ಕೆಲವು ಸುಲಭ ಆಸನಗಳನ್ನು ಹೇಳಿಕೊಡುವುದರ ಮೂಲಕ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಜನ ಜಾಗೃತಿ ಸ್ಥಾಪಕ ಅದ್ಯಕ್ಷರಾದ ಅಭಿಮನ್ಯಕುಮಾರ್ ಉದ್ಘಾಟಿಸಿ, ಪ್ರಾಸ್ತಾವಿಕ ಮಾತನಾಡಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ನಿವೃತ್ತ ಶಿಕ್ಷಕರಾದ ಮಾಚಯ್ಯ, ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಮೇಲ್ವಿಚರಕರು ಹಾಗೂ ಸೇವಾಪ್ರತಿನಿಧಿ ಉಪಸ್ಥಿತರಿದ್ದರು. ಪಟ್ಟಣದ ವಿವಿಧ ಸಂಘ-ಸಂಸ್ಥೆಗಳಾದ ಜೆಸಿಐ, ಅಕ್ಕನ ಬಳಗ, ಗ್ರಾಮ ಪಂಚಾಯತ್ ಸದಸ್ಯರು, ಉದ್ಯಮಿಗಳು, ಮಹಿಳಾ ಸಮಾಜದ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿಯ ಪ್ರಯೋಜನ ಪಡೆದುಕೊಂಡರು.











