ಮಡಿಕೇರಿ NEWS DESK ನ.13 : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಚೆಂಬು ಗ್ರಾಮದ ಮನೆಯೊಂದರಿಂದ ನಗದು ಮತ್ತು ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಶಿವಮೊಗ್ಗ ಭದ್ರಾವತಿಯ ಸಿದ್ದಾಪುರ ಗ್ರಾಮದ ಎನ್.ಸಿದ್ದಲಿಂಗ(28) ಹಾಗೂ ಎನ್.ರಘು(26) ಎಂಬುವವರೇ ಬಂಧಿತರಾಗಿದ್ದು, ಆರೋಪಿಗಳಿಂದ 8.50 ಲಕ್ಷ ರೂ. ನಗದು ಮತ್ತು 120 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.
ನ.5ರಂದು ಸಂಪಾಜೆ ಸಮೀಪದ ಎಂ.ಚೆಂಬು ಗ್ರಾಮದ ವೀರಪ್ಪ.ಪಿ.ಪಿ. ಎಂಬವರು ಮನೆಯಲ್ಲಿ ಇಲ್ಲದ ಸಂದರ್ಭ ಮನೆಗೆ ನುಗ್ಗಿ ಕ್ಯಾಶ್ ಲಾಕರ್‌ನಲ್ಲಿದ್ದ 15 ಸಾವಿರ ನಗದು ಮತ್ತು 120 ಗ್ರಾಂ ಚಿನ್ನಾಭರಣವನ್ನು ಕಳವು ಮಾಡಲಾಗಿತ್ತು. ಈ ಕುರಿತು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಡಿಕೇರಿ ಡಿವೈಎಸ್‌ಪಿ ಸೂರಜ್, ವೃತ್ತ ನಿರೀಕ್ಷಕ ಚಂದ್ರಶೇಖರ್, ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಮತ್ತು ಅಪರಾಧ ಪತ್ತೆ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.










