ಮಡಿಕೇರಿ ನ.14 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕು, ವಿವಿಧ ಆದಿವಾಸಿ ಬುಡಕಟ್ಟು ಸಂಘಗಳು ಇವರ ಸಹಯೋಗದೊಂದಿಗೆ ಶ್ರೀ ಭಗವಾನ್ ಬಿರ್ಸಾಮುಂಡಾರವರ 151 ನೇ ಜಯಂತಿಯ ಪ್ರಯುಕ್ತ ಜನಜಾತೀಯ ಗೌರವ ದಿವಸ್ ಆಚರಣಾ ಸಮಾರಂಭವು ನವೆಂಬರ್, 15 ರಂದು ಬೆಳಗ್ಗೆ 10.30 ಗಂಟೆಗೆ ತಿತಿಮತಿ, ಸಮುದಾಯ ಭವನ ಸಭಾಂಗಣದಲ್ಲಿ ನಡೆಯಲಿದೆ. ನವೆಂಬರ್, 15 ರಂದು ಬೆಳಗ್ಗೆ 10 ಗಂಟೆಗೆ ಮರೂರು, ತಿತಿಮತಿ ಶಾಲೆಯ ಮುಂಭಾಗದಿಂದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ವರೆಗೆ ಮೆರವಣೆಗೆ ನಡೆಯಲಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಇತರರು ಪಾಲ್ಗೊಳ್ಳಲಿದ್ದಾರೆ.










