ಮಡಿಕೇರಿ ನ.14 NEWS DESK : ವಿರಾಜಪೇಟೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಇಂದೇ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಹಾರೈಸಿದರು. ಪಂಡಿತ್ ಜವಾಹರ್ ಲಾಲ್ ನೆಹರುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿ, ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಶಾಲೆಯ ಪ್ರಾಧ್ಯಾಪಕರೊಂದಿಗೆ ಮಾತನಾಡುತ್ತಾ ಮಕ್ಕಳಿಗೆ ದೊರಕುತ್ತಿರುವ ಎಲ್ಲಾ ಸೌಲತ್ತುಗಳ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ರಫೀಕ್, ಪಕ್ಷದ ಮುಖಂಡರು ಜೋಕಿಮ್, ಸೂರಜ್ ಹೊಸೂರು,ಮಂಜುನಾಥ್, ನರೇಂದ್ರ ಕಾಮತ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ಜಮ್ಮಡ ಸೋಮಣ್ಣ, ಶಬೀರ್, ಸಫನ್, ಹಾಗೂ ಶಿಕ್ಷಕ ವೃಂದದವರು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.











