ಮಡಿಕೇರಿ ನ.14 NEWS DESK : ಕಳೆದ 25 ವರ್ಷಗಳಿಂದ ಅಭಿವೃದ್ಧಿ ಕಾಣದೆ ನೆನೆಗುದಿಗೆ ಬಿದ್ದಿದ್ದ ಮಡಿಕೇರಿ-ಗಾಳಿಬೀಡು-ಕಡಮಕಲ್ಲು ರಸ್ತೆ ದುರಸ್ತಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ಗಾಳಿಬೀಡು ಗ್ರಾಮದ ಕೋಳಿಗೂಡು ಎಂಬಲ್ಲಿ ಶಾಸಕರು ಭೂಮಿಪೂಜೆ ನೆರವೇರಿಸಿ, ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದರು. ಈ ಸಂದರ್ಭ ಗಾಳಿಬೀಡು ವಲಯ ಕಾಂಗ್ರೆಸ್ ಅಧ್ಯಕ್ಷ ಎಂ.ಡಿ.ಸುಭಾಷ್ ಆಳ್ವ, ಮಾಜಿ ಅಧ್ಯಕ್ಷ ಕೋಳುಮುಡಿಯನ ಅನಂತಕುಮಾರ್, ಜಿಲ್ಲಾ ಕಾಂಗ್ರೆಸ್ ಸದಸ್ಯ ಐಲಪಂಡ ಪುಷ್ಪ ಪೂಣಚ್ಚ, ಅಕ್ರಮ ಸಕ್ರಮ ಸಮಿತಿ ಸದಸ್ಯ ಹರಿಪ್ರಸಾದ್ ಕೋಚನ, ವಲಯ ಕಾಂಗ್ರೆಸ್ ಸದಸ್ಯರುಗಳಾದ ಮದನ್ ಕೊಂಬಾರನ ಹಾಗೂ ಗಣಪತಿ, ಪ್ರಮುಖರಾದ ತೆನ್ನಿರಾ ಮೈನ, ಹೆಚ್.ಎ.ಹಂಸ ಅಪ್ರು ರವೀಂದ್ರ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು. ಅಭಿವೃದ್ಧಿ ಕಾಣದೆ ನೆನೆಗುದಿಗೆ ಬಿದ್ದಿದ್ದ ಮಡಿಕೇರಿ-ಗಾಳಿಬೀಡು-ಕಡಮಕಲ್ಲು ರಸ್ತೆ ದುರಸ್ತಿಗೆ ಶಾಸಕ ಡಾ.ಮಂತರ್ ಗೌಡ ಅವರ ಪ್ರಯತ್ನದ ಫಲವಾಗಿ ರೂ.3.50 ಕೋಟಿ ಬಿಡುಗಡೆಯಾಗಿತ್ತು.











