ಮಡಿಕೇರಿ ನ.14 NEWS DESK : ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಕ್ರೀಡಾ ಸ್ಪರ್ಧೆಯಲ್ಲಿ ಮಡಿಕೇರಿಯ ಸಂತ ಜೋಸೆಫರ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯ -ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಫುಟ್ಬಾಲ್ ಆಟದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಕೆ.ಎನ್.ವಿಧಿತ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿದ ಎಂಟನೇ ತರಗತಿಯ ವಿದ್ಯಾರ್ಥಿನಿ ಬಿ.ಡಿ.ಧೃತಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯನಿಯವರು, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿ ವೃಂದ ಅಭಿನಂದನೆಗಳನ್ನು ಸಲ್ಲಿಸಿ ಶುಭ ಹಾರೈಸಿದ್ದಾರೆ.











